ತೇರದಾಳ: ಪಟ್ಟಣದಲ್ಲಿ ಕೋರೋಣ ವೈರಸ್ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಯವರಿಗೆ, ಬಿಜೆಪಿಯ ಪುರಸಭೆ ಸದಸ್ಯರು ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರ್ ಕುಂಬಾರ್ ಇವರು ಕರೋನವೈರಸ್ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವ ಇಲಾಖೆಗಳಲ್ಲಿ ಪೊಲೀಸ್ ಇಲಾಖೆಯೂ ಕೂಡ ಒಂದು, ತಮ್ಮ ಜೀವವನ್ನು ಲೆಕ್ಕಿಸದೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ತೇರದಾಳ ಪೊಲೀಸ್ ಠಾಣೆಯ ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪಿಎಸ್ಐ ವಿಜಯ ಕಾಂಬಳೆ ಅವರು ಪತ್ರಿಕೆಯೊಂದಿಗೆ ಮಾತನಾಡಿ ಸನ್ಮಾನ ಗೌರವಕ್ಕಿಂತ ಎಲ್ಲ ಸಾರ್ವಜನಿಕರು ತಮ್ಮ ತಮ್ಮ ಮನೆಯಲ್ಲಿ ಇದ್ದು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು ಪುರಸಭೆಯ ಸದಸ್ಯರ ಮುಖಾಂತರ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯವರು ಹಾಗೂ ಬಿಜೆಪಿಯ ಎಲ್ಲ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.
Social Plugin