-ಅನ್ಯ ರಾಜ್ಯಗಳಿಂದ ಆಗಮಿಸಿದ ಜನರನ್ನು ರಬಕವಿಯ ಹೊರವಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿರುವುದು.


ರಬಕವಿ-ಬನಹಟ್ಟಿಯಲ್ಲಿ 285 ಜನರ ಕ್ವಾರಂಟೈನ್ 

ರಬಕವಿ-ಬನಹಟ್ಟಿ,ಮೇ15: ರಬಕವಿ-ಬನಹಟ್ಟಿ ತಾಲ್ಲೂಕಿನ ಅಂತರ ಜಿಲ್ಲೆ, ಅಂತರ ರಾಜ್ಯಗಳಿಂದ ಆಗಮಿಸಿದ 189 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಹಾಗೂ 96 ಜನರನ್ನು ಹೋಮ ಕ್ವಾರಂಟೈನ್ ಮಾಡಲಾಗಿದೆ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ ಪ್ರಶಾಂತ ಚನಗೊಂಡ ತಿಳಿಸಿದರು. 

ರಬಕವಿ-ಬನಹಟ್ಟಿ ತಾಲ್ಲೂಕಿನಾದ್ಯಂತ ವಿವಿಧ ಜಿಲ್ಲೆ ಮತ್ತು ಮಹಾರಾಷ್ಟ್ರ, ರಾಜಸ್ಥಾನ ಹಾಗು ತಮಿಳನಾಡು ರಾಜ್ಯಗಳಿಂದ ಬಂದಿರುವ ಒಟ್ಟು 285 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಬಕವಿ, ತೇರದಾಳ ಹಾಗೂ ಜಗದಾಳ ಸೇರಿದಂತೆ ವಿವಿಧೆಡೆಗಳಲ್ಲಿರುವ ರಬಕವಿಯ ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ತಹಶೀಲ್ದಾರ ತಿಳಿಸಿದರು. 

ಹೊರ ರಾಜ್ಯಗಳಿಂದ ಆಗಮಿಸುತ್ತಿರುವವರನ್ನು ತಾಲೂಕು ಚೆಕ್‍ಪೋಸ್ಟ್ ಆವರಣದಲ್ಲಿ ತೀವ್ರ ನಿಗಾ ವಹಿಸಿದ್ದು, ತಪಾಸಣೆ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು. 

ಇದೇ ಸಂದರ್ಭ ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ, ಗ್ರೇಡ್-2 ತಹಶೀಲ್ದಾರ ಎಸ್.ಬಿ. ಕಾಂಬಳೆ, ತೇರದಾಳ ಠಾಣಾಧಿಕಾರಿ ವಿಜಯ ಕಾಂಬಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ ಇದ್ದರು.