ಜನರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ. ಹೀಗಾಗಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು.
- ತಪ್ಪದೇ ನಮ್ಮ "ಸ್ವರೂಪ ಸಂದರ್ಶನ " ಫೇಸ್ಬುಕ್ ಪೇಜ್ ಲೈಕ್ ಮಾಡಿ ಜೊತೆಗೆ ಯೌಟ್ಯೂಬ್ ಚಾನಲ್ ಸಬ್ಸ್ಕ್ರೈಬ್ ಮಾಡಿ....
ಸುದ್ದಿ ಹಾಗೂ ಜಾಹೀರಾತುಗಳಿಗಾಗಿ ಸಂಪರ್ಕಿಸಿ : 9902523698....

Social Plugin