ಅನ್ಯ ರಾಜ್ಯಗಳಿಂದ ಆಗಮಿಸಿದ ಜನರನ್ನು ರಬಕವಿಯ ಹೊರವಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿರುವದು

ಮಹಾರಾಷ್ಟ್ರ, ರಾಜಸ್ಥಾನ ಹಾಗು ತಮಿಳನಾಡು ರಾಜ್ಯಗಳಿಂದ ಬಂದಿರುವ 15 ಜನರನ್ನು ರಬಕವಿಯ ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಯಿತು.
ಇದೇ ಸಂದರ್ಭ ತಹಶೀಲ್ದಾರ ಪ್ರಶಾಂತ ಚನಗೊಂಡ, ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ, ಗ್ರೇಡ್-2 ತಹಶೀಲ್ದಾರ ಎಸ್.ಬಿ. ಕಾಂಬಳೆ, ತೇರದಾಳ ಠಾಣಾಧಿಕಾರಿ ವಿಜಯ ಕಾಂಬಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ ತೀವ್ರ ನಿಗಾ ವಹಿಸಿದ್ದು, ಹೊರ ರಾಜ್ಯಗಳಿಂದ ಆಗಮಿಸುತ್ತಿರುವವರನ್ನು ತಾಲೂಕು ಚೆಕ್‍ಪೋಸ್ಟ್ ಆವರಣದಲ್ಲಿ ತೀವ್ರ ತಪಾಸಣೆ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವದು ತಾಲೂಕಿನ ಜನತೆ ನಿರಾಳತೆಯಿಂದಿರಲು ಸಾಧ್ಯವಾಗುತ್ತಿದೆ.