ಬನಹಟ್ಟಿಯ ತಮ್ಮಣ್ಣಪ್ಪ ಚಿಕ್ಕೋಡಿ ಮಹಾವಿದ್ಯಾಲಯದಲ್ಲಿ ಎನ್‍ಎಸ್‍ಎಸ್ ಘಟಕದಿಂದ ಸಿಬ್ಬಂದಿ ವರ್ಗಕ್ಕೆ ಮಾಸ್ಕ್ ಮತ್ತು ಸ್ಯಾನಿಟೈಸರ ವಿತರಣೆ ಮಾಡಲಾಯಿತು.
ಕೋವಿಡ್–19 ಮುಂಜಾಗ್ರತೆ ಕ್ರಮಗಳು ಅಗತ್ಯ
ರಬಕವಿ-ಬನಹಟ್ಟಿ,ಮೇ27: ಕೋವಿಡ್–19 ಜಗತ್ತಿಗೆ ಅಂಟಿದ ಮಹಾಮಾರಿ. ಕೋವಿಡ್–19 ಬರದಂತೆ ಮುಂಜಾಗ್ರತೆ ಕ್ರಮಗಳನ್ನು ಪ್ರತಿಯೊಬ್ಬರು ಕೈಗೊಳ್ಳಬೇಕು ಎಂದು ಪ್ರಾಚಾರ್ಯ ಡಾ.ಜಿ.ಆರ್.ಜುನ್ನಾಯ್ಕರ್ ತಿಳಿಸಿದರು.
ಸ್ಥಳೀಯ ತಮ್ಮಣ್ಣಪ್ಪ ಚಿಕ್ಕೋಡಿ ಮಹಾವಿದ್ಯಾಲಯದಲ್ಲಿ ಎನ್‍ಎಸ್‍ಎಸ್ ಮತ್ತು ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಆಶ್ರಯದಲ್ಲಿ ಭಯೋತ್ಪಾದಕ ವಿರೋಧಿ ದಿನದ ಸಂದರ್ಭದಲ್ಲಿ ಸಿಬ್ಬಂದಿ ವರ್ಗಕ್ಕೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿ ಮಾತನಾಡಿದರು.
ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಕಾಲೇಜಿನಲ್ಲಿ  ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಡಾ.ಜಿ.ಆರ್.ಜುನ್ನಾಯ್ಕರ್ ತಿಳಿಸಿದರು. 
ಇದೇ ಸಂದರ್ಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಮನೋಹರ ಶಿರಹಟ್ಟಿ ಮಾತನಾಡಿ, ಭಯೋತ್ಪಾದನೆ ಜಗತ್ತನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಭಯೋತ್ಪಾದನೆ ಮಾನವೀಯತೆಗೆ ವಿರುದ್ಧವಾದ ಒಂದು ಚಟುವಟಿಕೆಯಾಗಿದೆ. ಭಯೋತ್ಪಾದನೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡರೆ, ಸಾಕಷ್ಟು ಆಸ್ತಿಗಳಿಗೆ ನಷ್ಟ ಉಂಟಾಗಿದೆ. ಜಗತ್ತಿನ ಜನರೆಲ್ಲರೂ ನಾವೆಲ್ಲರೂ ಒಂದೇ ಎನ್ನುವ ಭಾವನೆ ನಮ್ಮಲ್ಲಿರಬೇಕು ಎಂದರು.
ಕಾರ್ಯಕ್ರಮದ ವೇದಿಕೆಯ ಮೇಲೆ ಪ್ರೊ.ಜಿ.ಎಸ್.ಪಾಟೀಲ, ಡಾ.ಪ್ರಕಾಶ ಕೆಂಗನಾಳೆ, ಪ್ರೊ. ಸುರೇಶ ನಿಡೋಣಿ, ಪ್ರೊ. ಗೀತಾ ಸಜ್ಜನ, ಪ್ರೊ. ಶಂಭು ಉಕ್ಕಲಿ ಇದ್ದರು.


- ತಪ್ಪದೇ ನಮ್ಮ "ಸ್ವರೂಪ ಸಂದರ್ಶನ " ಫೇಸ್ಬುಕ್ ಪೇಜ್ ಲೈಕ್ ಮಾಡಿ ಜೊತೆಗೆ ಯೌಟ್ಯೂಬ್ ಚಾನಲ್ ಸಬ್ಸ್ಕ್ರೈಬ್ ಮಾಡಿ.... 

ಸುದ್ದಿ ಹಾಗೂ ಜಾಹೀರಾತುಗಳಿಗಾಗಿ ಸಂಪರ್ಕಿಸಿ : 9902523698....