ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಸದಸ್ಯರಿಗೆ ಕೋವಿಡ್-19 ಬಗ್ಗೆ ತರಬೇತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸುತ್ತಿರುವುದು....
ಕಡ್ಡಾಯವಾಗಿ ಮಾಸ್ಕ್ ಧರಿಸಿ
ರಬಕವಿ-ಬನಹಟ್ಟಿ,ಜೂ13: ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ಎಂ. ಕೆ. ಮುಲ್ಲಾ ಹೇಳಿದರು.
ಅವರು ನಗರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸದಸ್ಯರಿಗೆ ಕೋವಿಡ್-19 ತಡೆಗಟ್ಟುವ ಬಗ್ಗೆ ತರಬೇತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ನಿಯಮಗಳನ್ನು ತಪ್ಪದೇ ಪಾಲಿಸಿ, ಪ್ರತಿ ಬಾರಿ ಕೈ ಸ್ವಚ್ಛವಾಗಿ ತೊಳೆದುಕೊಳ್ಳುವುದು, ಸ್ಯಾನಿಟೈಜರ್ ಬಳಕೆನ್ನು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಬಿ. ಎಸ್. ಪಟ್ಟಣಶೆಟ್ಟಿ, ಬನಹಟ್ಟಿ ವಲಯ ಮೇಲ್ವಿಚಾರಕರಾದ ಶಿವಕಲಾ ಎಸ್. ಕೆ. , ಬಸವಣೆಪ್ಪ, ಒಕ್ಕೂಟದ ಅಧ್ಯಕ್ಷೆ ಗೀತಾ, ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
- FOR ADVERTISEMENT CONTACT -
-9902523698-

Social Plugin