ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸಿಇಟಿ ಪರೀಕ್ಷಾ ಕೇಂದ್ರ ಮಂಜೂರು
ರಬಕವಿ-ಬನಹಟ್ಟಿ,ಜೂ27: ಪ್ರಸ್ತುತ ಸಾಲಿನಿಂದ ರಬಕವಿ ಬನಹಟ್ಟಿಯಲ್ಲಿ ಸಿಇಟಿ ಪರೀಕ್ಷಾ ಕೇಂದ್ರವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಬಾಗಲಕೋಟೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ ಪೂಜಾರಿ ತಿಳಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿ ಅವರು, ಈ ಭಾಗದ ಅಭ್ಯರ್ಥಿಗಳ ಮನವಿ ಮತ್ತು ಕೋವಿಡ್-19 ನಿಮಿತ್ತವಾಗಿ ರಬಕವಿ-ಬನಹಟ್ಟಿ ಸಿಇಟಿ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗಿದೆ.
ರಬಕವಿ-ಬನಹಟ್ಟಿಯಲ್ಲಿ ಸಿಇಟಿ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ವಿಶೇಷ ಕಾಳಜಿ ವಹಿಸಿದ ಶಾಸಕ ಸಿದ್ದು ಸವದಿ, ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ ಪೂಜಾರಿ, ನಿವೃತ್ತ ಪೆÇಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಮಾಜಿ ಸಚಿವೆ ಉಮಾಶ್ರೀಯವರಿಗೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ.
ಬನಹಟ್ಟಿಯಲ್ಲಿ ಸಿಇಟಿ ಪರೀಕ್ಷಾ ಕೇಂದ್ರವನ್ನು ಪ್ರಸ್ತುತ ಸಾಲಿನಿಂದ ಆರಂಭಿಸಿರುವುದರಿಂದ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಳ್ಳಲು ಇದೇ 29 ಸಂಜೆ 6.30 ರವರೆಗೆ ಕೊನೆಯ ಅವಕಾಶವನ್ನು ನೀಡಲಾಗಿದೆ ಎಂದು ಶಶಿಧರ ಪೂಜಾರಿ ತಿಳಿಸಿದರು.

Social Plugin