ಬನಹಟ್ಟಿಯ ಎಸ್‍ಆರ್‍ಎ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳನ್ನು ಸ್ಕ್ರೀನಿಂಗ ಮಾಡುತ್ತಿರುವುದು.
ಪರೀಕ್ಷಾ ಸಿಬ್ಬಂದಿ ವರ್ಗಕ್ಕೆ ಮಾಸ್ಕ್, ಹ್ಯಾಂಡ್ ಗ್ಲೌಸ್ ವಿತರಣೆ
ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯ
ರಬಕವಿ-ಬನಹಟ್ಟಿ,ಜೂ18: ಅವಳಿ ನಗರದ ಮೂರು ಕೇಂದ್ರಗಳಲ್ಲಿ ಪಿಯುಸಿ ದ್ವಿತೀಯ ವರ್ಷದ ಇಂಗ್ಲಿμï ಪರೀಕ್ಷೆಯು ಯಾವುದೆ ಸಮಸ್ಯೆ ಇಲ್ಲದೆ ಯಶಸ್ವಿಯಾಗಿ ನಡೆಯಿತು ಎಂದು ತಹಶೀಲ್ದಾರ್ ಪ್ರಶಾಂತ ಚನಗೊಂಡ ತಿಳಿಸಿದರು.
ಅವರು ಗುರುವಾರ ಸ್ಥಳೀಯ ಪೂರ್ಣ ಪ್ರಜ್ಞೆ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪತ್ರಿಕೆಯ ಜೊತೆಗೆ ಮಾತನಾಡಿದರು. ಬನಹಟ್ಟಿಯ ಎಸ್‍ಆರ್‍ಎ ಸಂಯುಕ್ತ ಪದವಿಪೂರ್ವ ಕಾಲೇಜು, ಸರ್ಕಾರಿ ಪಿಯು ಕಾಲೇಜು ಮತ್ತು ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರಗಳಿದ್ದು, ಆರೋಗ್ಯ ಇಲಾಖೆಯ ಸಹಾಯದೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸ್ಕ್ರೀನಿಂಗ್ ಮಾಡುವುದರ ಜೊತೆಗೆ ಅವರಿಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ತಿಳಿಸಲಾಗಿತ್ತು ಎಂದು ತಹಶೀಲ್ದಾರ್ ಚನಗೊಂಡ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಪ್ರೊ.ಬಿ.ಆರ್.ಗೊಡ್ಡಾಳೆ ಮಾತನಾಡಿ, ಎಸ್ಆರ್ಎ ಕೇಂದ್ರದಲ್ಲಿ ಯಾವುದೆ ಸಮಸ್ಯೆ ಇಲ್ಲದೆ ಪರೀಕ್ಷೆಗಳು ನಡೆದವು. ಜ್ವರ, ಶೀತ ಮತ್ತು ಕೆಮ್ಮಿನಿಂದ ಬಳಲುವ ಯಾವುದೆ ವಿದ್ಯಾರ್ಥಿಗಳು ಕಂಡು ಬರಲಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸ್ಕ್ರೀನಿಂಗ್ ಮಾಡಲಾಯಿತು. ಮಾಸ್ಕ್ ಬಿಟ್ಟು ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಯಿತು ಎಂದರು.
ನಗರಸಭೆಯ ಪೌರಾಯುಕ್ತ ಶ್ರೀನಿವಾಸ ಜಾಧವ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಮಾಧ್ವಾನಂದ ಗುಟ್ಲಿ, ಅಪ್ಪಾಜಿ ಹೂಗಾರ, ಎನ್.ಆರ್.ಮೀನಾಕ್ಷಿ, ಎಫ್.ಬಿ.ತಳವಾರ. ಬಿ.ಆರ್.ಬಿರಾದಾರ ಪಾಟೀಲ, ಡಾ.ಎಸ್.ಎಸ್.ಖಾನಪುರ ಇದ್ದರು.
ಕಾರಿನಲ್ಲಿ ಬಂದ ವಿದ್ಯಾರ್ಥಿಗಳು: ಉಚಿತ ಬಸ್ ಸೇವೆಯ ಸೌಲಭ್ಯವಿದ್ದರೂ ಬಹಳಷ್ಟು ವಿದ್ಯಾರ್ಥಿಗಳನ್ನು ಪಾಲಕರು ಕಾರಿನಲ್ಲಿ ಮತ್ತು ದ್ವಿಚಕ್ರ ವಾಹನದಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದರು. ಸರ್ಕಾರಿ ಪಿಯು ಕಾಲೇಜು ಮುಂಭಾಗದಲ್ಲಿ ಕಾರುಗಳ ಸಾಲು.
- FOR ADVERTISEMENT CONTACT -
- 9902523698 -

Social Plugin