ತೇರದಾಳ ಪಟ್ಟಣದ ಸರ್.ಎಂ. ವಿಶ್ವೇಶ್ವರಯ್ಯ ಪಿಯು ಸೈನ್ಸ್ ಕಾಲೇಜಿನ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು.
ತೇರದಾಳ ಸರ್.ಎಂ. ವಿಶ್ವೇಶ್ವರಯ್ಯ ಕಾಲೇಜಿನ ದ್ವಿತಿಯ ಪಿಯುಸಿ ಫಲಿತಾಂಶ ಶೇ.100ರಷ್ಟು
ತೇರದಾಳ : ಪಟ್ಟಣದ ಶ್ರೀಸಿದ್ಧೇಶ್ವರ ವಿದ್ಯಾವರ್ಧಕ ಸಂಘದs ಸರ್.ಎಂ. ವಿಶ್ವೇಶ್ವರಯ್ಯ ಕಾಲೇಜಿನ ದ್ವಿತಿಯ ಪಿಯುಸಿ ಫಲಿತಾಂಶ ಬಂದಿದ್ದು, ಕಾಲೇಜಿನ ಫಲಿತಾಂಶ ಶೇ.100ರಷ್ಟು ಆಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎ.ಎಸ್.ಸಿದ್ದಾಪೂರ ಹಾಗೂ ಸಂಸ್ಥೆಯ ಅಧ್ಯಕ್ಷ ಟಿ.ಆರ್.ದೇಸ್ತೋಟ ತಿಳಿಸಿದ್ದಾರೆ.
ಸ್ವಾತಿ.ಬಿಜ್ಜರಗಿ 561(ಶೇ.93.5) ಅಂಕ ಪಡೆದು ಕಾಲೇಜಿಗೆ ಪ್ರಥಮ.
ಕಾವ್ಯಾ ಮಾಲಗಾಂವಿ 555(ಶೇ.92.5) ರಷ್ಟು ಅಂಕ ಪಡೆದು ಕಾಲೇಜಿಗೆ ದ್ವಿತೀಯ.
ಸ್ವಾತಿ ಸಾವಂತನವರ 553(ಶೇ.92.16) ರಷ್ಟು ಅಂಕಗಳನ್ನು ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಒಟ್ಟು ಕಾಲೇಜಿನ ಫಲಿತಾಂಶ ಶೇ.100 ರಷ್ಟು ಆಗಿದ್ದು, 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 32 ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಪಾಸಾಗಿದ್ದಾರೆ. 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
- ನಿಮ್ಮ ಜಾಹೀರಾತುಗಳಿಗಾಗಿ
ಸಂಪರ್ಕಿಸಿ +91 9902523698




Social Plugin