ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ ರಬಕವಿ-ಬನಹಟ್ಟಿ,ಅ14: ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಾಗೇನವರ ಹೇಳಿದರು. 

ರಾಮಪೂರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ಸ್ಫೂರ್ತಿ ಸಂಗಮೇಶ ಬೆಳ್ಳಿಕಟ್ಟಿ ಇವರನ್ನು ಸನ್ಮಾನಿಸುತ್ತರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಾಗೇನವರ ಹಾಗೂ ಶಿಕ್ಷಕ ಸಂಘದ ಸದಸ್ಯರು.

  ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515......ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175....ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540.... 

 ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ ರಬಕವಿ-ಬನಹಟ್ಟಿ,ಅ14: ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಾಗೇನವರ ಹೇಳಿದರು. ಅವರು ರಾಮಪೂರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸುಪುತ್ರಿಯಾದ ಸ್ಫೂರ್ತಿ ಸಂಗಮೇಶ ಬೆಳ್ಳಿಕಟ್ಟಿ ಇವರನ್ನು ಸನ್ಮಾನಿಸಿ ಮಾತನಾಡಿದರು. ಮಕ್ಕಳಲ್ಲಿ ಪ್ರತಿಭೆ ಸಾಕಷ್ಟು ಇರುತ್ತದೆ ಅದನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದರಲ್ಲೂ ನಮ್ಮ ಶಿಕ್ಷಕರ ಸಂಘದ ಸದಸ್ಯರ ಮಗಳು ಸಾಧನೆ ಮಾಡಿದ್ದಾಳೆ. ರಾಮಪೂರದ ಪೂರ್ಣ ಪ್ರಜ್ಞೆ ಶಾಲೆಯ ವಿದ್ಯಾರ್ಥಿನಿಯಾಗಿರುವ ಸ್ಫೂರ್ತಿ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಇಂಗ್ಲೀಷ ಮಾಧ್ಯಮದಲ್ಲಿ 617 ಅಂಕ ಪಡೆದ ರಾಜ್ಯಕ್ಕೆ 9ನೇ ಸ್ಥಾನ ಪಡೆದಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ. ಡಿ. ನೇಮಗೌಡ, ಆರ್. ಬಿ. ಹೋಟಕರ, ಎ. ಜಿ. ಕಾಖಂಡಕಿ, ಬಿ. ಎಸ್. ಬಳ್ಳೂರ, ಬಿ. ಜೆ. ಜೋರಾಪೂರ, ಸಿ. ಜೆ. ಕಾರಜೋಳ, ಬಿ. ಎಸ್. ಕಲಬುರ್ಗಿ, ಎಲ್. ಎಸ್. ಹಂಜಗಿ, ಅನೀಲ ಕಡ್ಲಿ, ಆನಂದ ಕುಲಕರ್ಣಿ, ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲ್ಲಕಿನ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.


👇ಜಾಹೀರಾತುಗಳು ...