ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. 

ಶ್ರೀ ಪ್ರಣಬ್ ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರ ವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು. 
ಶ್ರೀ ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ! 

#PranabMukherjee