ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515 ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175 ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ........

73 ರ ಯೌವ್ವನದ ಸೃಷ್ಟಿಯ ಅತ್ಯದ್ಭುತ ಅತ್ಯಾಕರ್ಷಕ ಭರತ ಖಂಡವೇ,....... 

ನಿನ್ನೊಂದಿಗೆ ಈ ಕ್ಷಣ ನಾನಿರುವುದೇ ಒಂದು ಸೌಭಾಗ್ಯ.
ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾ.....
ಸ್ವಾತಂತ್ರ್ಯ ಪಡೆದ 73 ವರ್ಷಗಳು ......
ಆದರೆ,
ನಿನ್ನ ಅಸ್ತಿತ್ವ ಸಹಸ್ರಾರು ವರ್ಷಗಳ ನಿರಂತರ ಚಲನೆಯಿಂದ ಕೂಡಿದೆ......
ನನ್ನ ಭರತ ಖಂಡವೇ ಏನೆಂದು ವರ್ಣಿಸಲಿ - ಎಷ್ಟೆಂದು ವರ್ಣಿಸಲಿ ನಿನ್ನನ್ನು ......
ಪದಗಳು - ಭಾವಗಳು - ಕಲ್ಪನೆಗಳಿಗೂ ನಿಲುಕದ ನಿನ್ನನ್ನು ಹೇಗೆಂದು ಹಿಡಿದಿಡಲಿ ಈ ಪುಟ್ಟ ಹೃದಯದಲಿ....
ರಾಮಾಯಣ - ಮಹಾಭಾರತ - ಭಗವದ್ಗೀತೆಗಳೆಂಬ - ಅಸಾಮಾನ್ಯ ಬೃಹತ್ ಗ್ರಂಥಗಳು ನಿನ್ನಲ್ಲೇ ಸೃಷ್ಟಿಯಾದವು........
ಗೌತಮ ಬುದ್ಧ - ಮಹಾವೀರರೆಂಬ ಚಿಂತನ ಚಿಲುಮೆಗಳಿಗೆ ಜನ್ಮ ನೀಡಿದ್ದು ನೀನೇ.......
ಹಿಮಗಿರಿಯ ಸೌಂದರ್ಯ - ನಿತ್ಯ ಹರಿದ್ವರ್ಣದ ಕಾಡುಗಳು - ತುಂಬಿ ತುಳುಕುವ ನದಿಗಳು - ಕೌತುಕದ ಬೆಟ್ಟ ಗುಡ್ಡಗಳು - ಆಕರ್ಷಕ ಮರುಭೂಮಿ - ವಿಸ್ತಾರವಾದ ಬಯಲುಗಳು ಅಡಗಿರುವುದೂ ನಿನ್ನಲ್ಲೇ....
ಹಿಂದೂ - ಮುಸ್ಲಿಂ - ಕ್ರಿಶ್ಚಿಯನ್ - ಸಿಖ್ - ಬುದ್ಧ - ಜೈನ - ಪಾರ್ಸಿಗಳೆಲ್ಲರ ಆಶ್ರಯದಾತ ನೀನೇ.....
ಋಷಿ ಮುನಿಗಳ - ದಾಸ ಆಚಾರ್ಯರ - ಪಂಡಿತ ಪಾಮರರ ನೆಲೆವೀಡು ನಿನ್ನದೇ......‌
ಸಮಾನತೆಯ ಹರಿಕಾರ - ಪ್ರಜಾ ಕ್ರಾಂತಿಯ ಧೀಮಂತ ಬಸವಣ್ಣ ಜನಿಸಿದ್ದು ಈ ಮಣ್ಣಿನಲ್ಲಿಯೇ.....
ವಿಶ್ವ ದಾರ್ಶನಿಕ - ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು ಹುಟ್ಟಿದ್ದು ಈ ನೆಲದಲ್ಲೇ.....
ಹಿಂದೆಂದೂ ಹುಟ್ಟಿರದ ಮುಂದೆಂದೂ ಹುಟ್ಟಲಸಾಧ್ಯವಾದ ಅಂಬೇಡ್ಕರ್ ಎಂಬ ಜ್ಞಾನದ ಬೆಳಕಿನ ಕಿಡಿ ಬೆಳಗಿದ್ದು ನಿನ್ನ ತೋಳಿನಲ್ಲೇ....
ಮಾನವ ಜನಾಂಗದ ಕೌತುಕ ಗಾಂಧಿ ಎಂಬ ಮಹಾತ್ಮ ಬದುಕಿದ್ದುದು ನಿನ್ನ ಮಡಿಲಲ್ಲೇ....
ಹೆಣ್ಣೆಂಬುದು ದೇವತೆಯಾದದ್ದು ನಿನ್ನೀ ಮನದ ಭಾವನೆಗಳಲ್ಲೇ.....
ತಂದೆ - ತಾಯಿಗಳೇ ದೇವರಾದದ್ದು ನಿನ್ನೀ ನೆಲದ ಮಹಿಮೆಯಿಂದಲೇ....
ಸತ್ಯ - ಅಹಿಂಸೆ - ಆಧ್ಯಾತ್ಮ - ವೈಚಾರಿಕತೆ - ಸ್ವಾತಂತ್ರ್ಯ ಬೆಳೆದದ್ದು ನಿನ್ನೀ ಗುಣದಿಂದಲೇ.....
ಪ್ರೀತಿ - ತ್ಯಾಗ - ನಿಸ್ವಾರ್ಥ - ಮಾನವೀಯತೆ ತವರೂರು ನಿನ್ನಲ್ಲೇ ಅಡಗಿದೆ......
ಬಲಪಂಥ - ಎಡಪಂಥ - ಭಕ್ತಿಪಂಥ - ಕಾಯಕಪಂಥ - ಜ್ಞಾನಪಂಥ, 
ಆ ವಾದ ಈ ವಾದಗಳ ಪ್ರಯೋಗ ನಡೆಯುತ್ತಿರುವುದು ನಿನ್ನ ಒಡಲಾಳದಲ್ಲೇ...‌...
ಇಷ್ಟೊಂದು ಭಿನ್ನತೆಗಳು  ಈ ಸೃಷ್ಟಿಯಲ್ಲಡಗಿರುವುದು ನಿನ್ನಲ್ಲಿ ಮಾತ್ರ.........
ಶಾಂತಿ - ಸಹೋದರತೆ - ಭಾತೃತ್ವಗಳ ಈ ನಿನ್ನ ಮಡಿಲಲ್ಲಿ ಬೆಳೆಯುತ್ತಿರುವ ಅದೃಷ್ಟವಂತ ನಾನು...
ಮೇಲೆ ನೋಡಿದರೆ ಹಿಮರಾಶಿಯ ಕಾಶ್ಮೀರ,
ಕೆಳಗೆ ನೋಡಿದರೆ ನೀಲಿ ಸಾಗರದ ಕನ್ಯಾಕುಮಾರಿ,
ಪೂರ್ವಕ್ಕೆ ಸಪ್ತ ಸೋದರಿಯರ ಸುಂದರ ನಾಡು,
ಪಶ್ಚಿಮದಲ್ಲಿ ವಾಣಿಜ್ಯ ನಗರಿಯ ಬೀಡು,
ಮಧ್ಯದಲ್ಲಿ ವಿಂಧ್ಯ ಗಿರಿ,
ಅಗೋ ಅಲ್ಲಿ ನೋಡು ಹರಿಯುತ್ತಿದ್ದಾಳೆ ಗಂಗೆ,
ಇಗೋ ಇಲ್ಲಿ ನೋಡು ನಲಿಯುತ್ತಿದ್ದಾಳೆ ಕಾವೇರಿ,
ಅಲ್ಲಲ್ಲಿ ಮುದುನೀಡುವ ಮನೋಹರ ನದಿ ಕಾಡುಗಳು,
ಅಲ್ಲಿಯೇ ಹುಲಿಯ ಘರ್ಜನೆ, 
ನವಿಲ ನರ್ತನ, ಕುಹೂ ಕುಹೂ ಗಾನ,
ಹಾಡಲೊಂದು ಶಾಸ್ತ್ರೀಯ ಸಂಗೀತ,
ಕೇಳಲೊಂದು ಕರ್ನಾಟಕ ಸಂಗೀತ,
ಅಲ್ಲೊಂದಿಷ್ಟು ಮರುಭೂಮಿ, ಇಲ್ಲೊಂದಿಷ್ಟು ಪಶ್ಚಿಮ ಘಟ್ಟಗಳು,
ಓದಲು ರಾಮಾಯಣ, ಮಹಾಭಾರತ,
ಕಲಿಯಲು ಬೃಹತ್ ಸಂವಿಧಾನ,
ಅರಿಯಲೊಬ್ಬ ಬುದ್ದ, ಅಳವಡಿಸಿಕೊಳ್ಳಲೊಬ್ಬ ಬಸವ,
ಬುದ್ಧಿ ಹೇಳಲೊಬ್ಬ ವಿವೇಕಾನಂದ,
ತಿಳಿವಳಿಕೆ ಮೂಡಿಸಲೊಬ್ಬ  ಅಂಬೇಡ್ಕರ್,
ಎಲ್ಲರೊಳಗೊಬ್ಬ ಗಾಂಧಿ,
ಒಬ್ಬಳೇ ಹೆಂಡತಿ, ಒಬ್ಬನೇ ಗಂಡ,
ಗುರುಹಿರಿಯರೆಂಬ ಗೌರವ,
ಮಕ್ಕಳೇ ಮಾಣಿಕ್ಯವೆಂಬ ಸಂಸ್ಕಾರ,
ಆಡಲು ಹಾಕಿ, ನೋಡಲು ಕ್ರಿಕೆಟ್,
ಕಾಯಲೊಬ್ಬ ಪ್ರಧಾನಮಂತ್ರಿ,
ಕರುಣಿಸಲೊಬ್ಬ ಮುಖ್ಯಮಂತ್ರಿ,
ಸಂಭ್ರಮಿಸಲು ಸಂಕ್ರಾಂತಿ, 
ಸ್ವಾಗತಿಸಲು ಯುಗಾದಿ,
ಕುಣಿದು ಕುಪ್ಪಳಿಸಲು ಗಣೇಶ,
ಮನರಂಜಿಸಲು ದೀಪಾವಳಿ,
ವಿಜೃಂಬಿಸಲು ದಸರಾ,
ಭಾವೈಕ್ಯತೆಯ ರಂಜಾನ್,
ರಂಗುರಂಗಿನ ಕ್ರಿಸ್ ಮಸ್, 
ಸತ್ಯ, ಅಹಿಂಸೆ, ಮಾನವೀಯತೆ ಎಂಬ ಸಂಪ್ರದಾಯ,
ದಯವೇ ಧರ್ಮದ ಮೂಲವಯ್ಯ ಎಂಬ ಸಂಸ್ಕೃತಿ,
ಧನ್ಯ ಈ ನೆಲವೇ ಧನ್ಯ ಧನ್ಯ,
ನನ್ನುಸಿರಾಗಿರುವ ಭಾರತ ದೇಶವೇ,
ನಿನಗೆ ನನ್ನ ಶುಭಾಶಯದ ಹಂಗೇಕೆ,
ನೀನಿರುವುದೇ ನನಗಾಗಿ,
ನನ್ನ ಜೀವವಿರುವುದೇ ನಿನಗಾಗಿ,
ಭಿನ್ನತೆಯಲ್ಲೂ ಐಕ್ಯತೆ, ಅದುವೇ,
ನಮ್ಮ ಭಾರತೀಯ ಗಣರಾಜ್ಯ. 
ಈ ನನ್ನ ಜೀವ ನಿನಗಾಗಿ....ಎಂದೆಂದಿಗೂ ‌...
ಸ್ವಾತಂತ್ಯೋತ್ಸವದ ಶುಭಾಶಯಗಳೊಂದಿಗೆ
ಭವ್ಯ ಭವಿಷ್ಯದ ಕನಸುಗಳನ್ನು ಕಾಣುತ್ತಾ....ನಿಮ್ಮೊಂದಿಗೆ......

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ‌
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ಲೇಖನ : ವಿವೇಕಾನಂದ. ಹೆಚ್.ಕೆ.


 ಜಾಹೀರಾತುದಾರರು - ಗಂಗೋತ್ರಿ ನರ್ಸರಿ . ಬೆಳಗಾವಿ ರೋಡ್ ,ಚಿಕ್ಕೋಡಿ ಮಾಲೀಕರು : ಕಲ್ಮೇಶ .ಎಸ್ .ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ. ಮತ್ತು ಸುಪ್ರಸಿದ್ದ ಉತ್ಕಷ್ಟವಾದ ಸುಂದರ ಗಾರ್ಡನ್ ( ವಿನ್ಯಾಸಕರು ) ತಯಾರಕರು .ಸಂಪರ್ಕಿಸಿ - ೯೫೩೫೭೧೯೦೫೩ ... ೯೯೦೧೩೧೦೯೮೩... ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515 ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175 ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540

ವೈವಿಧ್ಯಮಯ ಭಾರತದ ವರ್ಣಮಯ ಜೀವನಶೈಲಿ.........


ಸುರಿವ ಬೆವರು ಟವಲಿನಲ್ಲಿ ಒರೆಸಿಕೊಂಡು ಪಂಚೆ ಎತ್ತಿ ಕಟ್ಟಿ ಸೈಕಲ್ ತುಳಿಯುತ್ತಾ ಸಾಗುವ ತಮಿಳಿನವ.......
ದಟ್ಟ ಮೀಸೆಯ ದಪ್ಪ ಶರೀರದ ಗಡುಸು ಧ್ವನಿಯ ಕುಡುಗೋಲಿಡಿದು ಕುರುಚಲು ದಾರಿಯಲ್ಲಿ ನಡೆಯುತ್ತಿರುವ ತೆಲುಗಿ‌ನವ........
ಬಿಳಿ ಸೀರೆಯುಟ್ಟು ಕಡುಕಪ್ಪು ತಲೆಗೂದಲ ರಾಶಿಯ, ಹಣೆಗೆ ಕುಂಕುಮ ತಲೆಗೆ ಹೂಮುಡಿದ ಮಾಲೆಯಾಳಿ ಕುಟ್ಟಿ.......
ತಲೆಗೆ ರುಮಾಲು ಸುತ್ತಿ ಜೋಳದ ರಾಶಿಯ ನಡುವೆ ಕುಕ್ಕರಗಾಲಿನಲ್ಲಿ ಕುಳಿತು ಕಳೆ ಕೀಳುತ್ತಿರುವ ಕನ್ನಡಿಗ,............
ಸೇಬಿನಂತ ಕೆನ್ನೆಯ, ಹಿಮದ ರಾಶಿಯನ್ನೇ ಮೈಮೇಲೆ ಆವರಿಸಿಕೊಂಡಂತ್ತಿರುವ ತಣ್ಣನೆಯ ನಗುವಿನ ಕಾಶ್ಮೀರಿ ಸುಂದರಿ.......
ತಲೆಗೆ ಬಣ್ಣದ ಟೋಪಿ ಹಾಕಿ, ಕೈಯಲ್ಲಿ ಆಕಳು ಹಿಡಿದು ಸಂಜೆಗತ್ತಲಲ್ಲಿ ಬಿರಬಿರನೆ ಹೆಜ್ಜೆಯಾಕುತ್ತಾ ಸಾಗುವ ಗಂಡನ ಹಿಂದೆ, ರಂಗುರಂಗಾದ ಲಂಗ ದಾವಣಿ ಹಾಕಿ, ಕಿವಿ ಮೂಗುಗಳಿಗೆ ಮುತ್ತಿನ ಒಡವೆಗಳನ್ನು ತೊಟ್ಟು ತಲೆಯ ಮೇಲೆ ಸೌದೆ ಹೊತ್ತು ಸಾಗುವ ಈಶಾನ್ಯದ ಸಿಕ್ಕಿಂ ನಾಗಾಲ್ಯಾಂಡ್ ತ್ರಿಪುರ ಮಿಜೋರಾಂ ಅರುಣಾಚಲ ಮೇಘಾಲಯ   ಮಣಿಪುರಿಗಳು........
ಬೆನ್ನಿಗೆ ಮಗುವನ್ನು ಕಟ್ಟಿಕೊಂಡು, ಸೊಂಟಕ್ಕೆ ಚೀಲ ಸಿಕ್ಕಿಸಿಕೊಂಡು ಬೆಳಗಿನ ಚಳಿಯಲ್ಲಿ ಚಹಾ ತೋಟದ ಎಲೆ ಬಿಡಿಸುತ್ತಿರುವ ಅಸ್ಸಾಮಿಗಳು.........
ಟ್ರ್ಯಾಕ್ ಸೂಟ್ ಹಾಕಿಕೊಂಡು ಮೈದಾನದಲ್ಲಿ ದೂರ ದೂರ ಓಡುವ, ಅಖಾಡದಲ್ಲಿ ಕಚ್ಚೆ ಕಟ್ಟಿಕೊಂಡು ಕುಸ್ತಿ ಅಭ್ಯಾಸ ಮಾಡುವ, ಹುರಿ ಮೀಸೆಯ ಹರಿಯಾಣಾದವರು........
ರೋಟಿ ಸುಡುತ್ತಾ ಕೋಳಿ ಬೇಯಿಸುತ್ತಾ ದುಪ್ಪಟದಲ್ಲಿ ಮೂಗನ್ನು ಒರೆಸಿಕೊಳ್ಳುತ್ತಿರುವ ಹೆಂಡತಿಯನ್ನು ಮಾತನಾಡಿಸುತ್ತಾ ಮರಕ್ಕೆ ದಾರದಲ್ಲಿ ಕಟ್ಟಿರುವ ಜೋಕಾಲಿಯಲ್ಲಿ ಮಗುವನ್ನು ತೂಗುತ್ತಿರುವ ರಾಜಸ್ಥಾನಿ........
ಸುತ್ತಲೂ ಹಾಕಿರುವ ಬೆಂಕಿಯ ಕೆಂಡದಲ್ಲಿ ಮೈ ಬಿಸಿ ಮಾಡಿಕೊಳ್ಳುತ್ತಾ ಬೀಡಿ ಸೇದುತ್ತಾ ಹಾದಿಯಲ್ಲಿ ಹೋಗುವವರಿಗೆಲ್ಲಾ ಜೈ ಶ್ರೀರಾಮ್ ಹೇಳುತ್ತಾ ತನ್ನ ಮಾರಾಟದ ಬೊಂಬೆಗಳನ್ನು ಗಾಡಿಗೆ ಕಟ್ಟುತ್ತಿರುವ ಉತ್ತರ ಪ್ರದೇಶದವ.........
ವಿಧವಿಧವಾದ ಬಟ್ಟೆಗಳನ್ನು ಒಪ್ಪವಾಗಿ ಜೋಡಿಸಲು ಸಹಾಯಕಿಗೆ ಹೇಳುತ್ತಾ ಕ್ಯಾಷ್ ಕೌಂಟರಿನಲ್ಲಿ ಹಣದ ಪೆಟ್ಟಿಗೆಗೆ ಪೂಜೆ ಮಾಡುತ್ತಾ ಭಕ್ತಿಯಿಂದ ಕೈ ಮುಗಿಯುತ್ತಿರುವ ಗುಜರಾತಿನವ.........
ಎತ್ತಿನ ಗಾಡಿಯಲ್ಲಿ ಕಬ್ಬಿನ ರಾಶಿಯನ್ನು ಕಟ್ಟಿ ಸುಡು ಬಿಸಿಲಿನಲ್ಲಿ ದನಗಳನ್ನು ಚಾವಟಿಯಿಂದ ಹೊಡೆಯುತ್ತಾ ಕಾರ್ಖಾನೆಗೆ ಹೋಗುತ್ತಿರುವ ಮರಾಠಿಯವ......
ಸಿಹಿ ತಿನಿಸುಗಳನ್ನು ಲಗುಬುಗೆಯಿಂದ ಬಂದ ಗಿರಾಕಿಗಳಿಗೆ ಕೊಡುತ್ತಾ ಇನ್ನೊಂದಿಷ್ಟು ಚಂಪಾಕಲಿ ರಸಗುಲ್ಲಾಗಳನ್ನು ತಯಾರಿ ಮಾಡುವಂತೆ ಜೋರಾಗಿ ಕೂಗುತ್ತಾ ಇರುವ ಬೆಂಗಾಲಿ ಬಾಬು.......
ಸೂಟು ಬೂಟು ತೊಟ್ಟು ವಿದೇಶಿ ಪ್ರವಾಸಿಗರಿಗೆ ಪ್ರಖ್ಯಾತ ಮತ್ತು ಐತಿಹಾಸಿಕ ಚರ್ಚುಗಳು ಬೀಚುಗಳು ಹೋಟೆಲುಗಳ ಬಗ್ಗೆ  ಮಾಹಿತಿ ನೀಡುತ್ತಿರುವ ಗೋವಾದ ಪ್ರವಾಸಿ ಮಾರ್ಗದರ್ಶಕ...........
ಸೂರ್ಯಾಸ್ತದ ಸಮಯದಲ್ಲಿ ಮೀನು ಹಿಡಿಯುವ ದೋಣಿಯೊಂದಿಗೆ ದಡ ಸೇರಿ ಹೆಂಡತಿ ಮಕ್ಕಳೊಂದಿಗೆ ಅಂದು ಬಲೆಗೆ ಬಿದ್ದ  ವಿವಿಧ ಜಾತಿಯ ಮೀನುಗಳನ್ನು ಆರಿಸಿ ಚೀಲಕ್ಕೆ ತುಂಬುತ್ತಿರುವ ಒರಿಸ್ಸಾದವ.......
ಆಗ ತಾನೆ ಬೆಳಗಿನ ನಮಾಜು ಮುಗಿಸಿ ತನ್ನ ಸ್ವಂತದ ಟೆಂಪೋ ಟ್ರಾವಲರ್ ಗಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಒಪ್ಪಂದದ ಪ್ರಕಾರ  ಆಗ್ರಾದ ತಾಜ್ ಮಹಲ್ ತೋರಿಸಲು ಗಡಿಬಿಡಿಯಿಂದ ಗಾಡಿ ಒರೆಸುತ್ತಿರುವ ದೆಹಲಿಯವ.........
ತಮ್ಮ ಜನರ ಮೇಲೆ ಆಗಿಂದಾಗ್ಗೆ ನಡೆಯುತ್ತಿರು ದೌರ್ಜನ್ಯಕ್ಕಾಗಿ ದುಷ್ಟ ಭೂ ಮಾಲೀಕರ ಮೇಲೆ ಹಲ್ಲೆ ಮಾಡಲು ಒಂದಷ್ಟು ಯುವಕರಿಗೆ ಪ್ರಚೋದನೆ ಕೊಡುತ್ತಿರುವ ಛತ್ತೀಸ್ಗಢದವ........
ಕೃಪಾಣ ಧರಿಸಿ ಕೈಯಲ್ಲಿ ಖಡ್ಗ ಹಿಡಿದು ಭಾಂಗ್ರಾ ನೃತ್ಯ ಮಾಡುತ್ತಾ ಅಮೃತಸರದ ಸ್ವರ್ಣ ದೇಗುಲದ ಮುಂದೆ ಜನರನ್ನು ರಂಜಿಸುತ್ತಿರುವ ಪಂಜಾಬಿ.....
ಹೊಸ ಮಾದರಿಯ ಬಂದೂಕುಗಳನ್ನು ಪರಿಶೀಲಿಸುತ್ತಾ ಅದನ್ನು ಕೊಳ್ಳಲು ಬರುವ ಗಿರಾಕಿಗಳ ಏಜೆಂಟ್ ಗಳಿಗೆ ಮೊಬೈಲ್ ನಲ್ಲಿ ಅದರ ಮಾಹಿತಿ ಕೊಡುತ್ತಾ ಖುಷಿಯಿಂದಿರುವ ಜಾರ್ಖಂಡ್ ನವ....
ಕಾಡಿನ ಗಾಂಭೀರ್ಯ - ಸಮುದ್ರದ ರೌದ್ರೌವತೆಯ ಮಡಿಲಲ್ಲಿ ತನ್ನದೇ ಬದುಕು ಸಾಗಿಸುತ್ತಿರುವ ಅಂಡಮಾನ್ ನಿಕೋಬಾರ್ ದ್ವೀಪಗಳವರು........
ಅರವಿಂದ ಆಶ್ರಮದ ನೀರವ ಮೌನದಲ್ಲಿ ಆಧ್ಯಾತ್ಮಿಕ ಪುಸ್ತಕಗಳನ್ನು ಓದುತ್ತಾ ವಿಶ್ರಾಂತ ಜೀವನ ನಡೆಸುತ್ತಿರುವ ಪುದುಚೇರಿಯವ.......
ರಾಜಕೀಯದ ತವಕ ತಲ್ಲಣ ವಂಚನೆಗಳನ್ನು ಮೆಲುಕು ಹಾಕುತ್ತಾ ತನ್ನ ಭವಿಷ್ಯದ ಬಗ್ಗೆ ಚಿಂತಾಕ್ರಾಂತನಾಗಿ ಕೆಲಸ ಹುಡುಕುತ್ತಾ ಬೇರೆ ರಾಜ್ಯಕ್ಕೆ ವಲಸೆ ಹೋಗಲು ರೈಲು ಗಾಡಿ ಹತ್ತುತ್ತಿರುವ ಬಿಹಾರಿ......
ಸೌಂದರ್ಯವೇ ಮೈವೆತ್ತಂತ ಗಿರಿ ಶಿಖರಗಳ - ಯಾತ್ರಾ ಸ್ಥಳಗಳ ನೆಲದಲ್ಲಿ ವಾತಾವರಣದ ಏರಿಳಿತಗಳ ನಡುವೆ ನೆಮ್ಮದಿಯಿ ಬದುಕಿಗೆ ತಡಕಾಡುತ್ತಿರುವ ಉತ್ತರ ಕಾಂಡದವ........
ಎಷ್ಟೊಂದು ವಿಸ್ಮಯಗಳ ಅದ್ಭುತ ಅವರ್ಣನೀಯ ವೈವಿಧ್ಯಮಯ ದೇಶ ನಮ್ಮ ಈ ಭಾರತ..........
ಕೇವಲ ಚುನಾವಣಾ ರಾಜಕೀಯದ ಅಧಿಕಾರಕ್ಕಾಗಿ ಇದನ್ನು ಹಾಳು ಮಾಡದೆ ದೇಶದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರದು.
" ಏಕ್ ಭಾರತ್ ಶ್ರೇಷ್ಠ ಭಾರತ್ " 
ವಹೀ ಹೈ.....
" ಶ್ರೇಷ್ಠ ಭಾರತ್ ವಿವಿಧತಾಮೇ ಏಕತಾ * 

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ಲೇಖನ : ವಿವೇಕಾನಂದ. ಹೆಚ್.ಕೆ.


ಜಾಹೀರಾತು.....


- ನಿಮ್ಮ ಜಾಹೀರಾತುಗಳಿಗಾಗಿ ಸಂಪರ್ಕಿಸಿ - 9902523698...