ತೇರದಾಳ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಆಯ್ಕೆಯಾದ ಮೆಹಬೂಬ ಜಮಾದಾರ ಅವರ ಫೋಟೋ.

 ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮೆಹಬೂಬ ಜಮಾದಾರ ಆಯ್ಕೆ

ತೇರದಾಳ : ಕಾಂಗ್ರೆಸ್ ಪಕ್ಷದ ತೇರದಾಳ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಮೆಹಬೂಬ ಜಮಾದಾರ ಆಯ್ಕೆ ಮಾಡಿ ಸಾಮಾಜಿಕ ಜಾಲತಾಣ ಸಮೀತಿಯ ಜಿಲ್ಲಾಧ್ಯಕ್ಷರಾದ ಎಸ್.ಬಿ.ಬಗಲಿ ಹಾಗೂ ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಸ್.ಜಿ.ನಂಜಯ್ಯನಮಠ ಅವರು ಆದೇಶ ಹೊರಡಿಸಿದ್ದಾರೆ.

   ಕಾಂಗ್ರೆಸ್ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸುವ ಇವರ ಕಾರ್ಯವನ್ನು ಗುರುತಿಸಿ ಪಕ್ಷದ ಹಿರಿಯ ನಾಯಕರು ಮತ್ತು ಪಕ್ಷದ ವರಿಷ್ಟರ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಪಕ್ಷದ ತೇರದಾಳ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿದು ಮತ್ತು ಪಕ್ಷದ ಜನಪ್ರೀಯ ಕಾರ್ಯಕ್ರಮಗಳನ್ನು ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಮನ ಮುಟ್ಟುವಂತೆ ಕಾರ್ಯನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.