ರಬಕವಿ-ಬನಹಟ್ಟಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಸ್ಕ್ ಹಾಕಿಕೊಳ್ಳದೇ ಇರುವವರಿಗೆ ತಿಳುವಳಿಕೆ ಹೇಳುವುದರ ಜೊತೆಗೆ ದಂಡ ವಿಧಿಸುತ್ತಿರುವುದು
ಕಡ್ಡಾಯವಾಗಿ ಮಾಸ್ಕ ಧರಿಸಿ ಆರೋಗ್ಯವಂತರಾಗಿರಿ
ರಬಕವಿ-ಬನಹಟ್ಟಿ,ಸೆ29 : ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ಮಾಸ್ಕ ಹಾಕುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ದಂಡವನ್ನು ವಿಧಿಸಲಾಯಿತು.
ಈ ವೇಳೆ ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿ, ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರಕಾರದ ನಿಯಮಗಳನ್ನು ಪ್ರತಿಯೊಬ್ಬರು ತಪ್ಪದೇ ಪಾಲಿಸಿ, ಆರೋಗ್ಯವಂತರಾಗಿರಿ. ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತ್ತು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಇಲ್ಲವಾದಲ್ಲಿ ರೂ. 100 ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಮಹಾಲಿಂಗ ಮುಘಳಖೋಡ, ಕಿರಿಯ ಆರೋಗ್ಯ ನಿರೀಕ್ಷಕರಾದ ರಾಜಕುಮಾರ ಹೊಸೂರ, ಕಂದಾಯ ಅಧಿಕಾರಿ ರಮೇಶ ಮಳ್ಳಿ, ರಾಮ ಬಸಪ್ಪಗೋಳ ಸೇರಿದಂತೆ ಅನೇಕರು ಇದ್ದರು.

Social Plugin