ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ಸಿ.ಜಿ. ಮಠಪತಿಯವರಿಗೆ ನೀಡಿ ಗೌರವಿಸಲಾಯಿತು.

           ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ವಿತರಣೆ
ರಬಕವಿ-ಬನಹಟ್ಟಿ,ಸೆ11: ಉತ್ತಮ ವಾಗ್ಮಿ, ಸಾಹಿತಿ ಸಂಗೀತ ಕಲಾವಿದ, ಯೋಗಪಟುವಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕರಾದ ತಾಲೂಕಿನ ಹಿಪ್ಪರಗಿ ಗ್ರಾಮದ ಸಿ.ಜಿ. ಮಠಪತಿ ಅವರಿಗೆ ರಾಜ್ಯ ಪಪೂ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗು ಶಿಕ್ಷಣ ಮಂತ್ರಿ ಸುರೇಶಕುಮಾರ ಪ್ರಶಸ್ತಿ ಪ್ರದಾನ ಮಾಡಿದರು.
ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಿಯೋಜಿಸಿದ್ದ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಅಪಾರ ಶಿಷ್ಯ ಬಳಗ ಹೊಂದಿ ಇದೀಗ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಮಕನಮರಡಿಯ ಸರ್ಕಾರಿ ಪಪೂ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.