ರಬಕವಿ ಬನಹಟ್ಟಿ ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಫಲಾನುಭವಿಗೆ ಆದೇಶದ ಪ್ರತಿ ವಿತರಿಸಿದರು.

ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳು ಮುಟ್ಟಬೇಕು

ರಬಕವಿ-ಬನಹಟ್ಟಿ,ಸೆ15: ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸರ್ಕಾರದ ಸೌಲಭ್ಯಗಳು ಮುಟ್ಟಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ಮಧ್ಯವರ್ತಿಗಳ ಹತ್ತಿರ ಹೋಗಬಾರದು ಎಂದು ಕೆಎಚ್ಡಿಸಿ ನಿಗಮ ಮಂಡಳಿಯ ಅಧ್ಯಕ್ಷ, ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಮಂಗಳವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಗಳ ಒಟ್ಟು 188 ಅರ್ಹ ಫಲಾನುಭವಿಗಳಿಗೆ ಆದೇಶದ ಪ್ರತಿಗಳನ್ನು ವಿತರಣೆ ಮಾಡಲಾಗುತ್ತಿದೆ. ಪಿಂಚಣಿ ಪಡೆಯುವಲ್ಲಿ ಯಾವುದೆ ಸಮಸ್ಯೆಗಳು ಉಂಟಾದರೆ ಕಚೇರಿಯಲ್ಲಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಇಲ್ಲವೆ ನೇರವಾಗಿ ಶಾಸಕರನ್ನು ಸಂಪರ್ಕಿಸಬೇಕು ಎಂದು ಸವದಿ ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ಮಾತನಾಡಿ, ಮುಂದಿನ ದಿನಗಳಲ್ಲಿ 60 ಮತ್ತು 65 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಅರ್ಜಿ ಪಡೆಯಲಾರದೆ ವೃಧ್ಯಾಪ್ಯ ವೇತನ ನೀಡಲಾಗುವುದು. ಈ ಒಂದು ಯೋಜನೆ ಈಗ ಉಡಪಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಆರಂಭಗೊಂಡಿದೆ. ಈ ಯೋಜನೆ ಬಾಗಲಕೋಟೆಯ ಜಿಲ್ಲೆಯಲ್ಲಿ ಆರಂಭಗೊಂಡರೆ  ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಪ್ರಥಮವಾಗಿ ಅನುμÁ್ಠನಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ವೇದಿಕೆಯ ಮೇಲೆ ಗ್ರೇಡ್-2 ತಹಶೀಲ್ದಾರ್ ಎಸ್.ಬಿ.ಕಾಂಬಳೆ, ಉಪ ತಹಶೀಲ್ದಾರ್ ಎಸ್.ಎಲ್.ಕಾಗಿಯವರ, ಕಂದಾಯ ಅಧಿಕಾರಿಗಳಾದ ಶ್ರೀಕಾಂತ ಮಾಯನ್ನವರ, ಪಿ.ಆರ್.ಮಠಪತಿ, ಆನಂದ ಕಂಪು, ಸುರೇಶ ಅಕ್ಕಿವಾಟ ಇದ್ದರು. ಮಲ್ಲಿಕಾರ್ಜುನ ಖವಟಕೊಪ್ಪ ಕಾರ್ಯಕ್ರಮ ನಡೆಸಿಕೊಟ್ಟರು.