ರಬಕವಿ ಬನಹಟ್ಟಿ ನಗರಸಭೆ ಕಾರ್ಯಾಲಯದಲ್ಲಿ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಸಂಜೀವ ಹಿಪ್ಪರಗಿ ಮಾತನಾಡಿದರು.
ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ
ರಬಕವಿ-ಬನಹಟ್ಟಿ,ನ24: ಕೇಂದ್ರ ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಯೋಜನೆಯು ಸರಿಯಾಗಿ ಬಳಕೆಯಾಗುತ್ತಿಲ್ಲ. ತಾಲ್ಲೂಕು ಎಲವು ಕೀಳು ವೈದ್ಯರು 25 ದಿನಗಳಿಂದ ಕರ್ತವ್ಯಕ್ಕೆ ಬಂದಿಲ್ಲ. ಅವರು ಸರ್ಕಾರಿ ಆಸ್ಪತ್ರೆಯಲ್ಲಿಯ ಕೆಲಸದ ಜೊತೆಗೆ ಖಾಸಗಿ ಆಸ್ಪತ್ರೆಯನ್ನು ಹೊಂದಿದ್ದಾರೆ. ಅವರು ಹೆಚ್ಚಾಗಿ ತಮ್ಮ ಖಾಸಗಿ ಆಸ್ಪತ್ರೆಯಲ್ಲಿಯೇ ಶಸ್ತ್ರ ಚಿಕಿತ್ಸೆಗಳನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ಈ ಭಾಗದ ಬಡ ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಗುರುಪಾದಯ್ಯ ಮರಡಿಮಠ ಸೇರಿದಂತೆ ಉಳಿದ ಸದಸ್ಯರು ಆರೋಪಿಸಿದರು.
ಅವರು ಮಂಗಳವಾರ ಸ್ಥಳೀಯ ನಗರಸಭೆಯ ಸಭಾ ಭವನದಲ್ಲಿ ರಬಕವಿ ಬನಹಟ್ಟಿ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಸರ್ಕಾರಿ ಸೇವೆಯಲ್ಲಿರುವ ವೈದ್ಯರ ಜವಬ್ದಾರಿಗಳು ಸಾಕಷ್ಟಿವೆ. ವೈದ್ಯರು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು. ಕೋವಿಡ್-19 ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಬಡವರ ಹಣವನ್ನು ಹೀರುತ್ತಿವೆ.ಇಂಧ ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಂಡಿರುವಿರಿ ಎಂಬುದನ್ನು ತಿಳಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ನೇಮಗೌಡ ಮಾತನಾಡಿ, ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ 72 ಶಾಲಾ ಕೋಣೆಗಳಿಗೆ ಹಾನಿಯಾಗಿದೆ. ಇವುಗಳ ದುರಸ್ತಿಗಾಗಿ ಮತ್ತು ತಾಲ್ಲೂಕಿನಲ್ಲಿ ಬರುವ 33 ಶಾಲೆಗಳಲ್ಲಿ ಶೌಚಾಲಯ ಕಟ್ಟಡಕ್ಕಾಗಿ ಕ್ರಿಯಾ ಯೋಜನೆಯನ್ನು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅದೇ ರೀತಿಯಾಗಿ 39 ಶಾಲೆಗಳಲ್ಲಿ ನೀರಿನ ಸಮಸ್ಯೆ ಇದ್ದು ಬರುವಂಥ ದಿನಗಳಲ್ಲಿ ಸಮಸ್ಯೆಯನ್ನು ನಿವಾರಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ನ್ಯಾಯ ಬೆಲೆ ಅಂಗಡಿಯವರು ತಿಂಗಳುಗಳ ಕಾಲ ಪಡಿತರ ಧಾನ್ಯಗಳನ್ನು ವಿತರಣೆ ಮಾಡಬೇಕೆಂದು ಉಪಾಧ್ಯಕ್ಷ ಸುನಂದಾ ಮುಗಳಖೋಡ ಆರೋಪಿಸಿದರು. ನಿರ್ಲಕ್ಷ್ಯ ಮಾಡುತ್ತಿರುವ ನ್ಯಾಯ ಬೆಲೆ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ತಾಲ್ಲೂಕಿನ ವ್ಯಾಪ್ತಿಗೆ ಬರುವ ಹಿಪ್ಪರಗಿ ಗ್ರಾಮಕ್ಕೆ ತಾಲ್ಲೂಕಿನಿಂದ ನೇರ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ವಯೋವೃದ್ಧ-ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯ್ತಿ ಸದಸ್ಯ ಪುಂಡಲೀಕ ಪಲಭಾವಿ ತಿಳಿಸಿದರು. ಸಭೆಯ ವೇದಿಕೆಯ ಮೇಲೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಿವಾನಂದ ಮಂಟೂರ, ಉಪಾಧ್ಯಕ್ಷೆ ಸುನಂದಾ ಮುಗಳಖೋಡ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಪಟ್ಟಣಶೆಟ್ಟಿ ಇದ್ದರು.
Social Plugin