ರಬಕವಿ-ಬನಹಟ್ಟಿ ನಗರಸಭೆಯ ಸಭಾಭವನದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ನಗರಸಭೆ ರಬಕವಿ-ಬನಹಟ್ಟಿ ವತಿಯಿಂದ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಭಿgದಲ್ಲಿ ಪಾಲ್ಗೊಂಡು ಮಾತನಾಡಿದ ಪೌರಾಯುಕ್ತ ಶ್ರೀನಿವಾಸ ಜಾಧವ
ನಗರಸಭೆ ಸಿಬ್ಬಂದಿಗಳಿಗೆ ಆರೋಗ್ಯ ಚಿಕಿತ್ಸೆ
ರಬಕವಿ-ಬನಹಟ್ಟಿ,ಡಿ2: ರಬಕವಿ-ಬನಹಟ್ಟಿ ನಗರಸಭೆಗೆ ಸಂಬಂಧಿಸಿದಂತೆ ಎಲ್ಲ ಸಿಬ್ಬಂದಿಗಳು ಹಾಗೂ ನಗಸಭೆ ಸದಸ್ಯು ಸೇರಿದಂತೆ ಎಲ್ಲರ ಆರೋಗ್ಯ ಚಿಕಿತ್ಸೆ ಕೈಗೊಳ್ಳಲಾಗುತ್ತಿದೆ ಎಂದು ಪೌರಾಯುಕ್ತ ಶ್ರೀನಿವಾಸ ಜಾಧವ ತಿಳಿಸಿದರು.
ಅವರು ರಬಕವಿ-ಬನಹಟ್ಟಿ ನಗರಸಭೆಯ ಸಭಾಭವನದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ನಗರಸಭೆ ರಬಕವಿ-ಬನಹಟ್ಟಿ ವತಿಯಿಂದ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿ, ಪೌರಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಎಲ್ಲ ರೀತಿಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಜೊತೆಗೆ ನಮ್ಮ ಪೌರಕಾರ್ಮಿಕರ ಎಲ್ಲ ಮನೆಯ ಸಿಬ್ಬಂದಿಗೂ ತಪಾಸಣೆ ನಡೆಸಲಾಗುತ್ತಿದ್ದು, ನಮ್ಮ ಸಿಬ್ಬಂದಿಗಳು ಹಾಗೂ ಎಲ್ಲ ಚುನಾಯಿತ ಜನಪ್ರತಿನಿಧಿಗಳಿಗೂ ಕೂಡಾ ಕೋವಿಡ್-19 ಟೆಸ್ಟ್‍ನ್ನು ಮಾಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಶ್ರೀಶೈಲ ಬೀಳಗಿ, ವ್ಯವಸ್ಥಾಪಕ ಬಿ. ಎಂ. ಡಾಂಗೆ, ಹಿರಿಯ ಆರೋಗ್ಯ ನೀರಿಕ್ಷಕರಾದ ಎಂ. ಎಂ. ಮುಗಳಖೋಡ, ಕಿರಿಯ ಆರೋಗ್ಯ ನೀರಿಕ್ಷಕ ರಾಜಕುಮಾರ ಹೊಸೂರ, ಇರ್ಫಾನ್ ಝಾರೆ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

Social Plugin