ವರದಿ : ವಿಜಯ ವಾಜಂತ್ರಿ
ತೇರದಾಳದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆ 6ನೇ ತರಗತಿಗೆ ಪ್ರವೇಶಕ್ಕಾಗಿ ಪರೀಕ್ಷೆಯು ನಡೆಯಿತು.
ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಗೆ ಪರೀಕ್ಷೆ
ತೇರದಾಳ : ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ ಆರನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆಯು ನಿಗದಿತ ಸಮಯಕ್ಕೆ ಪ್ರಾರಂಭವಾಯಿತು. ಪರೀಕಾ ಕೇಂದ್ರಕ್ಕೆ ಪಾಲಕರು ತಮ್ಮ ಮಕ್ಕಳನ್ನು ತಂದು ಬಿಡುತ್ತಿದ್ದರು. ಕೊರೊನಾ ಮುಂಜಾಗ್ರತ ಕ್ರಮವಾಗಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿತ್ತು. ಪರೀಕ್ಷಾ ಕೋಠಡಿಗಳನ್ನು ಸ್ಯಾನಿಟೈಜರ್ ಮಾಡಲಾಗಿತ್ತು. ಮಕ್ಕಳಿಗೆ ಥರ್ಮಲ್ ಸ್ಕ್ಯಾನರ್ ಪರೀಕ್ಷೆ ಮಾಡಲಾಯಿತು. ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದ್ದರು. ಮಾಸ್ಕ್ ತರದೆ ಇರುವ ವಿದ್ಯಾರ್ಥಿಗಳಿಗೆ ಶಾಲೆಯವರು ಮಾಸ್ಕನ್ನು ಕೊಡುವ ವ್ಯವಸ್ಥಯನ್ನು ಮಾಡಲಾಗಿದೆ ಎಂದು ಶಾಲೆಯ ಪ್ರಾಚಾರ್ಯ ಏ.ಬಿ.ಸದಲಗಿ ಹೇಳಿದರು. 
  122 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 79ಜನ ವಿದ್ಯಾರ್ಥಿಗಳು ಹಾಗೂ 43ಜನ ವಿದ್ಯಾರ್ಥಿನೀಯರು ಇದ್ದರು. ಪರೀಕ್ಷಾ ಮೇಲ್ವಚಾರಕರಾಗಿ ಬಸವರಾಜ ಹಿರೇಕೊಡಿ ಕಾರ್ಯನಿರ್ವಹಿಸಿದರು. ಒಟ್ಟು 17ಜನರನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದರು.