ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವೈಜ್ಞಾನಿಕ ವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಶೇಕಡ ಮುನ್ನೂರಕ್ಕೂ ಹೆಚ್ಚು ಪ್ರತಿಶತ ತೆರಿಗೆ ವಿಧಿಸುವೆ . ಇದರಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಲೀಟರ್ ಗೆ 100 ರೂಪಾಯಿಗಿಂತಲೂ ಹೆಚ್ಚಾಗಿದೆ .
ಜಗತ್ತಿನ ಯಾವ ದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಇಷ್ಟೊಂದು ತೆರಿಗೆ ವಿಧಿಸಿ ತನ್ನ ದೇಶದ ಪ್ರಜೆಗಳನ್ನು ಶೋಷಣೆ ಮಾಡುವ ಇನ್ನೊಂದು ಸರ್ಕಾರವಿಲ್ಲ.
ಕೋವಿಡ್ -19ನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.
ರೋಗಿಗಳಿಗೆ ಹಾಸಿಗೆ ಆಕ್ಸಿಜನ್ ವೆಂಟಿಲೇಟರ್ ಔಷಧೋಪಚಾರಗಳನ್ನು ಸಕಾಲಕ್ಕೆ ಒದಗಿಸಿದೆ ಲಕ್ಷಾಂತರ ಜನ ಬಲಿಯಾಗಿದ್ದಾರೆ
ಹಾಗೆಯೇ ಲಾಕ್ ಡೌನ್ ನಿಂದಾಗಿ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಬಡತನ ಮತ್ತು ಹಸಿವಿನಿಂದ ತತ್ತರಿಸಿದ್ದಾರೆ
ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆ ಏರಿಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣವಾಗಿದೆ.
ಅಡುಗೆ ಎಣ್ಣೆ ಲೀಟರ್ ಗೆ 200 ರೂಪಾಯಿ ದಾಟಿದೆ ಅಡುಗೆ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ಸಮೀಪಿಸುತ್ತಿದೆ.
ಇವುಗಳ ಜೊತೆಗೆ ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿದೆ.
ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ನೆರವಿಗೆ ನಿಲ್ಲಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನಬಂದಂತೆ ಪೆಟ್ರೋಲ್ ಮತ್ತು ರಾಜ್ಯ ಮೇಲೆ ತೆರಿಗೆ ವಿಧಿಸಿ ಜನರನ್ನು ಮತ್ತಷ್ಟು ಶೋಷಣೆ ಮಾಡುತ್ತಿವೆ.
ಆದ್ದರಿಂದ ರಾಷ್ಟ್ರಪತಿಗಳಾದ ತಾವು ತಕ್ಷಣ ಮಧ್ಯಪ್ರವೇಶ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅವೈಜ್ಞಾನಿಕ ತೆರಿಗೆ ಏರಿಕೆಯನ್ನು ಕೈಬಿಡುವಂತೆ ಸೂಚನೆ ನೀಡಬೇಕು.
ಹಾಗೆಯೇ ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಸೂಚಿಸಬೇಕೆಂದು ಕೋರುತ್ತೇವೆ
ಬಹುಜನ ಸಮಾಜ ಪಾರ್ಟಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಬಾಹುಸಾಹೇಬ ಕಾಂಬಳೆ ಅವರು ಮಾನ್ಯ ತಹಸೀಲ್ದಾರ್ ರವರಿಗೆ ಅರ್ಜಿ ಸಲ್ಲಿಸಿದ್ದರು ಹಾಗೂ.ಸಂದರ್ಭದಲ್ಲಿ ಗೀತಾ ಕಾಂಬಳೆ ವಕೀಲರು ಡಾ.ಹರೀಶ ವಗ್ಗಿ ಗಜಾನನ ಕಾಂಬಳೆ ಮಹೇಶ್ ಅಬ್ಬಿಹಾಳ ಶ್ರೀಕಾಂತ್ ಕಾಂಬಳೆ ಕಪಿಲ್ ಕಾಂಬಳೆ.ಮಾಹಾವೀರ ಕಾಂಬಳೆ ಸಾಕ್ಷಿ ಕಾಂಬಳೆ ಉಪಸ್ಥಿತರಿದ್ದರು

Social Plugin