ನಾಳೆ ಬೆಳಗ್ಗೆ 6:00 ಗಂಟೆಯಿಂದ 'KRTC' ಬಸ್ ಸಂಚಾರ ಆರಂಭ:
 ಚಾಲಕರು-ನಿರ್ವಾಹಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯ್ಲಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಕೆಎಸ್‌ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕು. ಜೊತೆಗೆ ಕೊರೊನಾ ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿದೆ ಎಂದು ಸಾರಿಗೆ ಸೂಚನೆ ನೀಡಿದೆ.