ವರದಿ : ವಿಜಯ ವಾಜಂತ್ರಿ
ತೇರದಾಳದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಸಿದ್ದು ಸವದಿ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಲಸಿಕೆಯನ್ನು ಹಾಕಿಸಿಕೊಳ್ಳಲು ಹಿಂಜರಿಕೆ ಬೇಡ

ತೇರದಾಳ : ಪಟ್ಟಣದಲ್ಲಿನ ಪ್ರತಿಯೊಬ್ಬರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳಬೇಕು. ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಕೆ ಬೇಡ ಎಂದು ಶಾಸಕ ಸಿದ್ದು ಸವದಿ ಹೇಳಿದರು.
  ಪಟ್ಟಣದ ಅಂಬೇಡ್ಕರ ಸರ್ಕಲ್‍ದಲ್ಲಿ ಕೊರೊನಾ ವೈರಾಣು ಕುರಿತು ಜಾಗೃತಿ ಮೂಡಿಸಿ ಮಾತನಾಡಿದ ಅವರು ಕೊರೊನಾವನ್ನು ತಡೆಗಟ್ಟಲು ಎಲ್ಲರೂ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಇಂದು 700 ಡೋಸ್‍ಗಳು 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಬಂದಿದೆ. ಹಾಗೂ ಬನಹಟ್ಟಿಯಿಂದ 18 ವರ್ಷ ಮೇಲ್ಪಟ್ಟವರಿಗೆ 200 ಲಸಿಕೆಗಳು ತೇರದಾಳ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿವೆ. ಲಸಿಕೆ ವಿತರಣೆಯಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ. 18 ವರ್ಷ ಮೇಲ್ಪಟ್ಟವರು ಲಸಿಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಹಾಕಿಸಿಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದರು.
  ಇ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುದರ್ಶನ ನಿಡೋಣಿ, ನಗರ ಘಟಕ ಅಧ್ಯಕ್ಷ ಮಹಾವೀರ ಕೊಕಟನೂರ, ಪ್ರಭಾರಿ ಅಧ್ಯಕ್ಷ ರಾಮಣ್ಣ ಹಿಡಕಲ್, ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಸದಾಶಿವ ಹೊಸಮನಿ, ಪುರಸಭೆ ಸದಸ್ಯರಾದ ಸಂತೋಷ ಜಮಖಂಡಿ, ವಿನಾಯಕ ಬಂಕಾಪೂರ, ಸದಾಶಿವ ಹೊಸಮನಿ, ಸಂಗಮೇಶ ಕಾಲತಿಪ್ಪಿ, ಕುಮಾರ ಸರಿಕರ, ಸಚೀನ ಕೊಡತೆ, ಆಕಾಶ ತೇಲಿ, ಭೀಮಶೀ ಹಿರೇಕುರುಬರ ಸೇರಿದಂತೆ ಇನ್ನಿತರರು ಇದ್ದರು.