ಉತ್ತಮ ವಾತಾವರಣ ನಿರ್ಮಾಣ ಮಾಡಲು ಮನೆಗೊಂದು ಸಸಿ ನೆಟ್ಟು ಪಾಲನೆ ಪೋಷಣೆ ಮಾಡುವ ಮೂಲಕ ಪರಿಸರ ಉಳಿಸಿ ಬೆಳೆಸಿ ಎಂದು ಬನಹಟ್ಟಿಯ ಹಿರಿಯ ದಿವಾಣಿ ನ್ಯಾಯಾಧೀಶೆ ರೇಶ್ಮಾ ಗೋಣಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ
ಬನಹಟ್ಟಿಯ ಹಳೇ ನೀರಿನ ಟಾಕಿ ಹಿಂಭಾಗದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿ, ಕೋವಿಡ್ ನಿಂದಾಗಿ ಆಕ್ಷಿಜನ್ ಕೊರತೆ ಎಷ್ಟಿದೆ ಎಂಬುದು ನಿಮಗೆ ಗೊತ್ತಿರುವ ವಿಷಯ.
ಮರ ಎಷ್ಟು ಉಪಯುಕ್ತವಾಗಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು
ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಮರ ಹಚ್ಚುವುದರ ಜೊತೆಗೆ ಮಕ್ಕಳಂತೆ ಪೋಷಿಸಿ ಎಂದರು.
ಕಿರಿಯ ದಿವಾಣಿ ನ್ಯಾಯಾಧೀಶ ಮಹೇಶ ಚಂದ್ರಕಾಂತ ಮಾತನಾಡಿ, ಮುಂದಿನ ಜನಾಂಗ ಉತ್ತಮ ಆರೋಗ್ಯ ಹೊಂದಬೇಕಾದಲ್ಲಿ ಪ್ರತಿಯೊಬ್ಬರು ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.
ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ

Social Plugin