ಶಾಲೆ ಪ್ರಾರಂಭವಾಗದಿದ್ದರೆ ಮುಂದೇನು..... ಹೈಕೋರ್ಟ್....!
ಬೆಂಗಳೂರು (ಜೂನ್ 4) ಕೋವಿಡ್ ಕಾರಣದಿಂದ ಶಾಲೆಗಳು ತೆರೆಯಲು ಸಾಧ್ಯವಾಗದಿದ್ದರೆ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯದಂತೆ ಸರ್ಕಾರ ನೀಲನಕ್ಷೆಯನ್ನು ಸಿದ್ಧಪಡಿಸಬೇಕು ನಿರ್ದೇಶಿಸಿರುವ ಹೈ ಕೋರ್ಟ್ ಪಠ್ಯ ಮತ್ತು ನೋಟ್ ಪುಸ್ತಕಗಳ ಜೊತೆ ತಾಂತ್ರಿಕ ಉಪಕರಣಗಳನ್ನು ವಿತರಿಸಲು ಕ್ರಿಯಾ ಯೋಜನೆಯನ್ನು ರೂಪಿಸಬೇಕು ಎಂದು ಸೂಚಿಸಿದೆ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳುನ್ನು ಸ್ಥಗಿತ ಗೊತ್ತಿರುವುದರಿಂದ ಆನ್ಲೈನ್ ಶಿಕ್ಷಣ ಪಡೆಯಲು ಬಡ ವಿದ್ಯಾರ್ಥಿಳ ಗೆ ಅಗತ್ಯ ಉಪಕರಣಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿಕೆ ಎ ಎ ಸಂಜೀವ್ ನರೇನ್ ಸೇರಿದಂತೆ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆಯ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ ಬಿ ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಆನ್ಲೈನ್ ತರಗತಿಗಳುನು ನಡೆಸಿದರು ಪಠ್ಯ, ನೋಟ್ಬುಕ್ ಪುಸ್ತಕ ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಆಗಿರುವುದಿಲ್ಲ ಆದರಿಂದ ರಾಜ್ಯ ಸರ್ಕಾರ ಶಾಲೆಗಳನ್ನು ಮರು ಪ್ರಾರಂಭಿಸುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಕೊಳ್ಳಬೇಕು ಪಠ್ಯ ಮತ್ತು ನೋಟ್ ಪುಸ್ತಕಗಳು ಜೊತೆಗೆ ತಾಂತ್ರಿಕ ಉಪಕರಣಗಳನ್ನು ವಿಸ್ತರಣೆ ಮಾಡಲು ಸರ್ಕಾರ ಕ್ರಿಯಾ ಯೋಜನೆ ರೂಪಿಸಬೇಕು ಪ್ರಮುಖವಾಗಿ ಆರ್ ಟಿ ಇ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಅಗತ್ಯ ಶಿಕ್ಷಣ ಪರಿಕರಣಗಳನ್ನು ಒದಗಿಸಲು ಕ್ರಮ ಜರುಗಿಸಬೇಕು ಎಂದು ಸೂಚಿಸಿತು.