ರಮೇಶ್ ಜಾರಕಿಹೊಳಿ ಹೊಸ ವರಸೆ : ರಾಜೀನಾಮೆ ಬೆದರಿಕೆ ಹಾಕಿದ್ರಾ ಮಾಜಿ ಸಚಿವ?
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇನ್ನೂ ತಣ್ಣಗಾದಂತೆ ಕಾಣುತ್ತಿಲ್ಲ. ಈ ನಡುವೆಯೇ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೊಸ ವರಸೆ ಆರಂಭಿಸಿದ್ದು, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಿಡಿ ಪ್ರಕರಣದಿಂದಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತಮ್ಮ ನಿರೀಕ್ಷೆಯಂತೆ ಬೆಂಬಲಕ್ಕೆ ನಿಂತಿಲ್ಲ. ಮಿತ್ರಮಂಡಳಿಯ ಕೆಲ ನಾಯಕರೇ ತಮ್ಮ ವಿರುದ್ಧ ತಂತ್ರ ಹೆಣೆಯುತ್ತಿದ್ದಾರೆ ಎನ್ನುವ ಕಾರಣ ನೀಡಿ ತನ್ನಿಂದ ಸರ್ಕಾರಕ್ಕೆ ಮುಜುಗರವಾಗುವುದಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.