ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೆ ಪಾಸಾಗುವ ಭಾಗ್ಯ?
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು : ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಫೇಲಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎನ್ನಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ರಚಿಸಿದ್ದ ತಜ್ಞರ ಸಮಿತಿ ವರದಿಯನ್ನು ಸರ್ಕಾರ ನ್ಯಾಯಾಲಯದ ಮುಂದಿಡಲಿದ್ದು, ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ ಸಮ್ಮತಿಸಿದರೆ ಇದರೊಂದಿಗೆ ಸುಮಾರು 1 ಲಕ್ಷದಷ್ಟು ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೇ ಈ ಬಾರಿ ಪಾಸಾಗುವ ಭಾಗ್ಯ ದೊರೆಯಲಿದೆ ಎನ್ನಲಾಗಿದೆ.