ವರದಿ : ಮಲ್ಲಿಕಾರ್ಜುನ ಘೋಸರವಾಡ.
ಬೆಳಗಾವಿ: ಜಿಲ್ಲಾ ಕಾಂಗ್ರೆಸ್ ಗೆ ಇಂದಿನಿಂದ ಯುವ ನಾಯಕರ ಎಂಟ್ರಿಆಗಿದ್ದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಯುವ ನಾಯಕ ರಾಹುಲ್ ಜಾರಕಿಹೊಳಿಯವರು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ್ ಶುಗರ್ಸ್ ಲಿ. ವತಿಯಿಂದ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಎಂಟ್ರಿಆಗಿದ್ದಾರೆ. ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕ ಜಾರಕಿಹೊಳಿ ಅವರು ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಯೂತ್ ಕಾಂಗ್ರೆಸ್ ಸದಸ್ಯರು ಹರ್ಷ ವ್ಯಕ್ತಪಡಿಸಿದರು. " ಕಳೆದ ಎರಡು ವರ್ಷಗಳಿಂದ ಇಡೀ ಜಿಲ್ಲಾಆದಂತೆ ಪ್ರವಾಸ ಹಾಗೂ ಕೋವಿಡ್ ಸಂದರ್ಭದಲ್ಲಿ ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿಯವರು ನಿರಂತರವಾಗಿ ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ ಇಂದು ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಎಂಟ್ರಿ ಕೊಟ್ಟಿರುವುದರಿಂದ, ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ಆನೆಬಲ ಬಂದಂತಾಗಿದೆ" ಎಂದು ಪಕ್ಷದ ಮುಖಂಡರು ಸಂತೋಷ ವ್ಯಕ್ತಪಡಿಸಿದರು. ಸಭೆಯಲ್ಲಿ ಕೆಪಿಸಿಸಿ ಕಾರ್ಯ ಅಧ್ಯಕ್ಷರು ಸತೀಶ್ ಜಾರಕಿಹೊಳಿಯವರು ರಾಹುಲ್ ಜಾರಕಿಹೊಳಿಯವರ ಪರಿಚಯಿಸಿ. ಇಂದಿನಿಂದ ಅವರು ಜಿಲ್ಲಾದಂತ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ರಾಹುಲ್ ಜಾರಕಿಹೊಳಿಯವರು ಸಭೆಯಲ್ಲಿ ಹಾಜರಿದ್ದರು ಎಲ್ಲಾ ಸದಸ್ಯರು ಹಾಗೂ ಮುಖಂಡರು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡರು.

Social Plugin