ನಾಳೆಯಿಂದ ಹೊಸ ಯಡಿಯೂರಪ್ಪ ಬರುತ್ತಾರೆ: ಬಿಎಸ್‌ವೈ ಪರ ಸಾಹುಕಾರ್ ಬ್ಯಾಟಿಂಗ್
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಳಗಾವಿ/ಗೋಕಾಕ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆದಿರುವ ಚರ್ಚೆಯ ಬೆನಲ್ಲೇ ಗೋಕಾಕ ಸಾಹುಕಾರ್, ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ಜೂನ್ 18ರ ನಂತರ ಹೊಸ ಯಡಿಯೂರಪ್ಪ ಆಗಿ ರಾಜ್ಯದ ಮುಂದೆ ಬರಲಿದ್ದಾರೆ ಎಂದು ಹೇಳಿದರು.
ಗೋಕಾಕ ನಗರದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರಲಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ. ಮುಂದಿನ ಚುನಾವಣೆಯೂ ಯಡಿಯೂರಪ್ಪ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಹೇಳಿದರು.