ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ, ಕೊಡಗು ಜಿಲ್ಲೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ.

ವರದಿ : ಮಲ್ಲಿಕಾರ್ಜುನ ಘೋಸರವಾಡ.

ಉಳಿದ ಜಿಲ್ಲೆಗಳಲ್ಲಿ ಮಾರ್ಗಸೂಚಿಯು ಕೆಲ ಸಡಿಲಿಕೆಗಳೊಂದಿಗೆ ಜೂನ್ 14 ರ ಬೆಳಗ್ಗೆ 6 ರಿಂದ ಜೂನ್ 21 ರ ಬೆಳಗ್ಗೆ 6 ಗಂಟೆವರೆಗೆ ಜಾರಿ.
*ವಾರದ ದಿನಗಳಲ್ಲಿ ರಾತ್ರಿ 7 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿ.
*ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಜಾರಿ. 

*ಎಲ್ಲಾ ಕಾರ್ಖಾನೆಗಳಿಗೆ 50% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ. ಗಾರ್ಮೆಂಟ್ ಗೆ 30% ರ ಮಿತಿ.
*ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ. 
*ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ. 
*ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ.