ಪ್ರವಾಹ ಭೀತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲು ತಾಲೂಕಾಡಳಿತಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹ ಭೀತಿ ಎದುರಿಸಲು ತಾಲೂಕಾ ಆಡಳಿತ ಸೂಕ್ತ ಕ್ರಮಗಳನ್ನು ಈಗಿಂದಲೇ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.
ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಇದರಿಂದ ಹಿರಣ್ಯಕೇಶಿ, ಮಾರ್ಕಂಡೆಯ ನದಿಗಳು ಮತ್ತು ಬಳ್ಳಾರಿ ನಾಲಾದಿಂದ ಅಪಾರ ಪ್ರಮಾಣದಲ್ಲಿ ಘಟಪ್ರಭಾ ನದಿಗೆ ನೀರು ಬರುತ್ತಿದೆ. ಘಟಪ್ರಭಾ ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಎದುರಾಗುತ್ತಿದ್ದರೂ ನಮ್ಮ ಅವಳಿ ತಾಲೂಕುಗಳಿಗೂ ಸಮಸ್ಯೆ ಎದುರಾಗಬಹುದು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ನದಿ ತೀರದ ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚಿಸಿದರು.
ನಿರಂತರ ಮಳೆಯಿಂದಾಗಿ ಶನಿವಾರದ ಮಾಹಿತಿ ಪ್ರಕಾರ ಹಿರಣ್ಯಕೇಶಿ ನದಿಗೆ 20946 ಕ್ಯೂಸೆಕ್ಸ್, ಮಾರ್ಕಂಡೇಯ ನದಿಗೆ 3110 ಕ್ಯೂಸೆಕ್ಸ್, ಬಳ್ಳಾರಿ ನಾಲಾ 3500 ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಹರಿದು ಬರುತ್ತಿದೆ. ಹಿಡಕಲ್ ಜಲಾಶಯದಲ್ಲಿ 11.45 ಟಿಎಂಸಿ ನೀರು ಸಂಗ್ರಹವಿದ್ದು, ಜಲಾಶಯಕ್ಕೆ 39515 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಸಕ್ತ ಸನ್ನಿವೇಶದಲ್ಲಿ ನಮ್ಮ ನದಿ ತೀರದ ಗ್ರಾಮಗಳಿಗೆ ಯಾವುದೇ ಆತಂಕವಿಲ್ಲವಾದರೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಅವಶ್ಯವಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಈ ನದಿಗಳ ಒಳಹರಿವು ಹೆಚ್ಚಾಗುತ್ತಿರುವುದರಿಂದ ಸಣ್ಣ ಸಣ್ಣ ಸೇತುವೆಗಳು ಈಗಾಗಲೇ ಮುಳುಗಡೆ.

Social Plugin