ನಾಳೆಯಿಂದ ರಾಜ್ಯದಲ್ಲಿ ಐದು ದಿನ ಬಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು : ಮುಂಗಾರು ಮಳೆ ಚುರುಕುಗೊಂಡಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.