ನಾಗಾಲ್ಯಾಂಡ್ ಗಡಿಯ ಅರಣ್ಯ ಪ್ರದೇಶದಲ್ಲಿ ರಸ್ತೆ ಅಪಘಾತ: ಬೆಳಗಾವಿ ಯೋಧ ಹುತಾತ್ಮ
ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಗೋಕಾಕ್ ತಾಲೂಕು ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಎಂಬುವರು ನಾಗಾಲ್ಯಾಂಡ್ ಗಡಿಯಲ್ಲಿ ಗಸ್ತು ತಿರುಗುವ ವೇಳೆ ಅವರ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಕಳೆದ 18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ, ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ನಲ್ಲಿ ನೇಮಕಗೊಂಡು ಸದ್ಯ ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾರತೀಯ ಸೇನೆಯಲ್ಲಿ ಚಾಲಕನಾಗಿದ್ದು, ತಮ್ಮ ಕರ್ತವ್ಯಕ್ಕೆ ತೆರಳುವಾಗ ಅರಣ್ಯದಲ್ಲಿ ವಾಹನ ಅಪಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಯೋಧನ ಪಾರ್ಥಿವ ಶರೀರ ನಾಳೆ ಸಂಜೆ 6 ಗಂಟೆಯ ಸುಮಾರಿಗೆ ಗೋವಾ ಮಾರ್ಗವಾಗಿ ಸ್ವಗ್ರಾಮಕ್ಕೆ ಬರಲಿದ್ದು, ಬೆಳಗಾವಿಯಲ್ಲಿ ಯೋಧನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಸಾಧ್ಯತೆ ಇದೆ.

Social Plugin