ಬೆಳಗಾವಿ, ಜು.12: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ನಿನ್ನೆ ಡಂಗೂರ ಬಾರಿಸಿ ಎಚ್ಚರಿಕೆ ನೀಡಿದ್ದಾರೆ.
ಜು.12ರಿಂದ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುವ ಮಳೆಯಿಂದ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಉಂಟಾಗಿ ಅಪಾರ ಹಾನಿ ಸೃಷ್ಟಿಸುತ್ತದೆ.
ಪ್ರತಿ ಬಾರಿ ಪ್ರವಾಹ ಬಂದಾಗ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಈಗ ಪ್ರವಾಹ ಮುನ್ನವೇ ಡಂಗೂರ ಸಾರಿ ಎಚ್ಚರಿಕೆ ನೀಡಿದ್ದಾರೆ.

Social Plugin