ತೇರದಾಳದಲ್ಲಿ ಆರಂಭಗೊಂಡ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ ಮಾಡುತ್ತಿರುವ ಆರೋಗ್ಯ ಸಿಬ್ಬಂದಿ.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ
ಆರಂಭಗೊಂಡ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದೂರಾದ ಆತಂಕ
ತೇರದಾಳ : ಕೊರೊನಾ ಎರಡನೆ ಅಲೆಯಿಂದಾಗಿ 2020-21ನೇ ಸಾಲಿನಲ್ಲಿ ಶಾಲೆಗಳು ಆರಂಭಗೊಳ್ಳದೆ ಇದ್ದು, ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಓದಿ ಪರೀಕ್ಷೆಯನ್ನು ಬರೆಯಲು ತಯಾರಾಗಿ ಇಂದು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಬಂದು ಕೇದ್ರದ ಆವರಣದಲ್ಲಿ ರ್ಯಾಪಿಡ್ ಪರೀಕ್ಷೆ ಹಾಗೂ ಸಾಮಾಜಿಕ ಅಂತರದೊಂದಿಗೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಹೋಗಿ ಪರೀಕ್ಷೆ ಬರೆದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ನಿಯೋಜಿತ ಸಿಬ್ಬಂದಿ ಹೊರತು ಪಡಿಸಿ ಅನ್ಯ ವ್ಯಕ್ತಿಗಳ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಸ್ಯಾನಿಟೈಸರ್‍ನ್ನು ಕೊಡಲಾಗಿತ್ತು.
ಪರೀಕ್ಷಾ ಕೇಂದ್ರಗಳಿಗೆ ಇಂದು ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಪ್ರೇರಿಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳು 3184, ಖಾಸಗಿ ವಿದ್ಯಾರ್ಥಿಗಳು 38, ಕಳೆದ ವರ್ಷ ಪರೀಕ್ಷೆಯಲ್ಲಿ ಫೇಲಾಗಿ ಈ ವರ್ಷ ಪರೀಕ್ಷೆ ಬರೆಯಲು 452, ಒಟ್ಟು ವಿದ್ಯಾರ್ಥಿಗಳು 3688 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದಾರೆ. ತಾಲೂಕಿನಲ್ಲಿ 20 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಸರಕಾರದ ನಿರ್ದೇಶನದಂತೆ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಆಸನದ ವ್ಯವಸ್ಥೆ ಮಾಡಲಾಗಿದೆ. 650 ಸಿಬ್ಬಂದಿಗಳನ್ನು ಪರೀಕ್ಷೆಗೆ ನಿಯೋಜನೆ ಮಾಡಲಾಗಿದೆ. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಸ್ಕ್ಯಾನೀಂಗ್ ಮಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪ್ರವೇಶ ನೀಡಲಾಗಿದೆ. ನಮ್ಮ ತಾಲೂಕಿನಲ್ಲಿ ಯಾವುದೇ ಸಮಸ್ಯೆಗಳಿರುವ ಪ್ರಕರಣಗಳು ಕಂಡು ಬಂದಿಲ್ಲ.ಕೋವಿಡ್ ಸಮಸ್ಯೆಗಳು ಕಂಡು ಬಂದರೆ ಅವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ ಎಂದು ಹೇಳಿದರು.
Social Plugin