ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ವರದಿ : ಮಲ್ಲಿಕಾರ್ಜುನ ಘೋಸರವಾಡ.
ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಹೇಳಿದರು.
ತಮ್ಮ ತಾಯಿ-ತಂದೆಯವರ ಸ್ಮರಣಾರ್ಥವಾಗಿ ನಮ್ಮ ಕುಟುಂಬವು ಶ್ರೀಗಳ ಸಂಕಲ್ಪದಂತೆ ಅರಭಾವಿ ಮಠದಲ್ಲಿ ಸುಸಜ್ಜಿತ ಸಮುದಾಯ ಭವನವನ್ನು ನಿರ್ಮಾಣ ಮಾಡಿದೆ. ನಿರ್ಮಾಣದ ಕಾಮಗಾರಿ ಮುಗಿದಿದ್ದು, ಶೀಘ್ರದಲ್ಲಿಯೇ ಇದನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ಹೇಳಿದರು.
Social Plugin