ಕಕ್ಷಿದಾರರಿಗೆ ಉತ್ತಮ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ನ್ಯಾಯಾಧೀಶ ಮತ್ತು ವಕೀಲರ ಮಧ್ಯದಲ್ಲಿ ಪರಸ್ಪರ ಸಹಕಾರ ಮುಖ್ಯ ಎಂದು ಸ್ಥಳೀಯ ವಕೀಲರ ಸಂಘದ ಹಿರಿಯ ವಕೀಲ ಎಂ.ಜಿ.ಕೆರೂರ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ನ್ಯಾಯಾಲಯಕ್ಕೆ ಕಿರಿಯ ಶ್ರೇಣಿಯ ನ್ಯಾಯಾಧೀಶರಾಗಿ ಆಗಮಿಸಿದ ಸುಶ್ಮಾ ಟಿ.ಸಿಯವರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನ್ಯಾಯಾಧೀಶೆ ಸುಶ್ಮಾ ಟಿ.ಸಿ. ಮಾತನಾಡಿ, ಮುಂಬರುವ ದಿನಗಳಲ್ಲಿ ನಾವೆಲ್ಲರೂ ಉತ್ತಮವಾಗಿ ಕೆಲಸ ನಿರ್ವಹಿಸುವುದರ ಮೂಲಕ ಕಕ್ಷಿದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಹಕರಿಸೋಣ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ ಮಾತನಾಡಿ ಅಗಸ್ಟ್ ತಿಂಗಳ ೧೪ ರಂದು ಮೇಘಾ ಲೋಕ್ ಅದಾಲತ್ ಕಾರ್ಯಕ್ರಮವಿದ್ದು ಈ ಸಂದರ್ಭದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸುವ ನಿಟ್ಟಿನಲ್ಲಿ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯಕ್ಕೆ ಸಹಕರಿಸಬೇಕು ಎಂದರು.ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.
ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ

Social Plugin