ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
2 ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ಯಡಿಯೂರಪ್ಪ ಇಂದು 3 ಗಂಟೆಗೆ ರಾಜಭವನಕ್ಕೆ ತೆರಳಿ ರಾಜಿನಾಮೆ ನೀಡುವುದಾಗಿ ಘೋಷಿಸಿದರು.
ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ರಾಜಕೀಯ ಜೀವನವನ್ನು ಭಾವನಾತ್ಮಕವಾಗಿ ಯಡಿಯೂರಪ್ಪ ನೆನೆದರು. ಇಬ್ಬರು ಶಾಸಕರಿಂದ ಆರಂಭವಾದ ನಮ್ಮ ಸಾಧನೆ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಷ್ಟು ಬೆಳೆದಿದೆ. ಈ ಸಾಧನೆಗೆ ಲಕ್ಷಾಂತರ ಜನ ಕಾರ್ಯಕರ್ತರ ಪರಿಶ್ರಮ ಕಾರಣ ಎಂದರು. 75 ವರ್ಷ ಮೀರಿದ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಬೇಕು ಎಂದು ದೇವರಲ್ಲಿ ಈ ಬಗ್ಗೆ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
BREAKING: ವಿಧಾನಸೌಧದಲ್ಲಿ ಸಾಧನಾ ಸಮಾವೇಶ: ಬಳಿಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆBREAKING: ವಿಧಾನಸೌಧದಲ್ಲಿ ಸಾಧನಾ ಸಮಾವೇಶ: ಬಳಿಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ

Social Plugin