ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ರಾ.ಹೆ.50ರಲ್ಲಿ ನಡೆದಿತ್ತು. ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಕಾರು ಅಪಘಾತದ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ರಾತ್ರಿ 10 ಗಂಟೆ ಸುಮಾರಿಗೆ ಬೆಳಗಾವಿ ಜಿಲ್ಲೆ ಅಥಣಿಯ ಮನೆಗೆ ವಾಪಸ್ ಆಗಿದ್ದರಂತೆ. ಅಪಘಾತದ ಬಳಿಕ ತಂದೆ ಲಕ್ಷ್ಮಣ ಸವದಿ ಜೊತೆ ಸಂಪರ್ಕ ನಿರಂತರ ಸಂಪರ್ಕದಲ್ಲಿದ್ದರು. ಅಪಘಾತದ ಸುದ್ದಿ ಕೇಳಿ ಮಗನಿಗೆ ಲಕ್ಷ್ಮಣ ಸವದಿ ತರಾಟೆಗೆ ತೆಗೆದುಕೊಂಡಿದ್ದರು. ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿ ಮಾತಾಡಿ ನಿನ್ನೆ ಸಂಜೆ ಅಥಣಿಯಿಂದ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.ಚಿದಾನಂದ ಸವದಿ ಕೊಪ್ಪಳ ಪ್ರವಾಸಕ್ಕೆ ಬಂದಿದ್ದರು.

Social Plugin