ಪ್ರವಾಹ ಪರಿಸ್ಥಿತಿ ಅವಲೋಕನ: ಭಾನುವಾರ ಬೆಳಗಾವಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿರುವ ಸಿಎಂ.
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು: ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಯವರ ಕಚೇರಿ, 'ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ' ಎಂದು ತಿಳಿಸಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಾಗೂ ಹೆಚ್ಚು ಮಳೆ ಬೀಳುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿಯವರು ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.