*ಉದ್ಯೋಗ ಮೇಳ ಯಶಸ್ವಿ*
 ರಬಕವಿಯ ಜನಶಕ್ತಿ ಸೇವಾ ಕೇಂದ್ರದಿಂದ ಉದ್ಯೋಗ ಮೇಳದಲ್ಲಿ ವಿಜಯಪುರ, ಬೆಳಗಾವಿ ಹಾಗು ಬಾಗಲಕೋಟೆ ಜಿಲ್ಲೆಗಳ ಹಲವಾರು ಯುವಕ-ಯುವತಿಯರು ಪಾಲ್ಗೊಂಡಿದ್ದರು. ಬೆಳಿಗ್ಗೆಯಿಂದಲೇ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ಪಕ್ಕದ ಜಿಲ್ಲೆಗಳಿಂದ ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಬಂದು ಮಾಹಿತಿ ಪಡೆದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ್ದವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಉದ್ಯೋಗ ಮೇಳದಲ್ಲಿ ಬೆಂಗಳೂರು ಹಾಗು ತುಮಕೂರು ಜಿಲ್ಲೆಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು. ಇದೇ ಸಂದರ್ಭ ಖಾಲಿಯಿರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನೂ ನೀಡಲಾಯಿತು. ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಬಸವರಾಜ ಬಾಳಿಕಾಯಿ, ಕಾರ್ಯದರ್ಶಿ ಸಂಗಮೇಶ ಮಡಿವಾಳ ಉಪಸ್ಥಿತರಿದ್ದರು.


ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ