ಬೆಳಗಾವಿ: ಜಿಲ್ಲೆಯ ಗೋಕಾಕ ಹಾಗೂ ಗೊಡಚಿನಮಲ್ಕಿ ಜಲಪಾತಗಳು ಮತ್ತು ದೂಪದಾಳ ಪ್ರವಾಸಿ ತಾಣದಲ್ಲಿ ಶನಿವಾರ, ಭಾನುವಾರ ಹಾಗೂ ರಜಾ ದಿನಗಳಂದು ಸಾರ್ವಜನಿಕ ವೀಕ್ಷಣೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಗುರುವಾರ ಆದೇಶ ಹೊರಡಿಸಿದ್ದಾರೆ.
'ಕೋವಿಡ್ ಹಾಗೂ ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆ ನೆರೆಯ ಮಹಾರಾಷ್ಟ್ರದಲ್ಲಿ ತೀವ್ರವಾಗಿದೆ. ಅಲ್ಲಿಂದ ಮತ್ತು ರಾಜ್ಯದ ವಿವಿಧೆಡೆಯಿಂದ ಈ ಪ್ರವಾಸಿ ತಾಣಗಳ ವೀಕ್ಷಣೆಗೆ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ನೂರಾರು ಪ್ರವಾಸಿಗರು ಬರುತ್ತಿದ್ದಾರೆ. ಇದರಿಂದ ಇಲ್ಲಿಯೂ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ' ಎಂದು ತಿಳಿಸಿದ್ದಾರೆ.
'ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು' ಎಂದು ಎಚ್ಚರಿಕೆ ನೀಡಿದ್ದಾರೆ.

Social Plugin