ಪ್ರವಾಹ ಪೀಡಿತ ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳಿಗೆ ಭೇಟಿ ನೀಡಿದ:ಉಸ್ತುವಾರಿ ಸಚಿವ ಉಮೇಶ್ ಕತ್ತಿ.
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಮಹಾಲಿಂಗಪುರ : ಹಳೆ ನಂದಗಾಂವ ಗ್ರಾಮದಲ್ಲಿ ಉಳಿದುಕೊಂಡಿರುವ ಕುಟುಂಬಸ್ಥರು ಹೊಸ ನಂದಗಾಂವ ಗ್ರಾಮದಲ್ಲಿ ನಿರ್ಮಿಸಿರುವ ಆಸರೆ ಮನೆಗಳಿಗೆ ಸ್ಥಳಾಂತರಗಗೊಂಡು ಪ್ರವಾಹದಿಂದ ಶಾಸ್ವತ ಮುಕ್ತಿ ಹೊಂದಿರಿ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಹೇಳಿದರು.

ಶನಿವಾರ ಸಂಜೆ ಪ್ರವಾಹ ಪೀಡಿತ ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟಪ್ರಭಾ ನದಿಗೆ ಸದ್ಯ ೧ ಲಕ್ಷ ೩೭ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನೀರು ಸುತ್ತುವರೆದ ಕಾರಣ ಹಳೆ ನಂದಗಾಂವ ಗ್ರಾಮದಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಇರಲು ಅನುಕೂಲ ಇಲ್ಲದವರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳಲು ವಿನಂತಿಸಿದರು.