ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ನೆರೆ ಸಂಕಷ್ಟ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಬಳಿಕ ಮಾತನಾಡಿ, ಮಳೆ ಕಡಿಮೆಯಾದರೂ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ನೀರು ತುಂಬಿಕೊಂಡಿದ್ದು, ನೀರು ಹಾಗೆಯೇ ನಿಂತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿದೆ. ಇದರಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. ಭಾರಿ ಮಳೆ ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ 13 ಜನ ಸಾವನ್ನಪ್ಪಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದಾರೆ ಎಂದರು.
ಮಳೆಯಿಂದ ಶೇ.75ರಷ್ಟು ಭಾಗ ಮನೆಕಳೆದುಕೊಂಡವರಿಗೆ 5 ಲಕ್ಷ ಹಾಗೂ ಅರ್ಧ ಮನೆ ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.ಬೆಳೆ ಹಾನಿ ಸಮೀಕ್ಷೆ ನಡೆಸಿ 15 ದಿನಗಳಲ್ಲಿ ವರದಿ ನೀಡಬೇಕು ಹಾಗೂ ಮನೆ ಹಾನಿಯಾದವರಿಗೆ ತಕ್ಷಣ 10,000 ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.