ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿಗೆ 15೦೦೦ ಲಸಿಕೆ ಬಂದಿದ್ದು, ತಾಲ್ಲೂಕಿನಲ್ಲಿ 7470 ಜನರಿಗೆ ಕೋವಿಡ್-೧೯ ಲಸಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಜನರಿಗೆ ಲಸಿಕೆಯನ್ನು ಒಂದೇ ದಿನದಲ್ಲಿ ನೀಡಲಾಗಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಭಯ ಬೇಡ. ಕೆಲವು ಜನರು ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಆದರೆ ಎರಡನೆಯ ಡೋಸ್ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಆದ್ದರಿಂದ ಅಂಥವರೂ ಕೂಡಾ ಲಸಿಕೆಯನ್ನು ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರ್ಡ್ಗಳಲ್ಲಿ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.
ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ

Social Plugin