ನೂಲಿ ಚಂದಯ್ಯನವರ ಕಾಯಕ ತತ್ವ ಕೇವಲ ಒಂದೇ ಜನಾಂಗಕ್ಕೆ ಸಿಮೀತವಾಗಿರದೆ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಾಮಪುರದ ಶ್ರೀ ಲಕ್ಷ್ಮಿದೇವಿ ಮತ್ತು ದುರ್ಗಾದೇವಿ ದೇವಸ್ಥಾನದ ಮುಂದೆ ನೂಲಿ ಚಂದಯ್ಯನವರ ೯೧೪ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸಾಮಾಜಿಕ ಪರಿವರ್ತನೆಗಾಗಿ ಕೆಲಸ ಮಾಡಿದ ನೂಲಿ ಚಂದಯ್ಯನವರಂತೆ ನಾವು ಕೂಡಾ ಸಮಾಜದ ಅಭಿವೃದ್ಧಿಗಾಗಿ ದೀನ ದಲಿತರ ಉದ್ಧಾರಕ್ಕಾಗಿ ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ. ಹಿಂದೂಳಿದ ತುಳಿತಕ್ಕೊಳ್ಳಗಾದ ಸಮಾಜವನ್ನು ಮೇಲೆತ್ತುವ ಕೆಲಸವನ್ನು ನಾವೆಲ್ಲರೂಮಾಡೋಣ.
ನೂಲಿ ಚಂದಯ್ಯ ಸಮಾಜದ ಯಾವುದೇ ಕೆಲಸವಿರಲಿ ಅವುಗಳನ್ನು ಮಾಡಿಕೊಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಹಾಗೂ ರಬಕವಿ-ಬನಹಟ್ಟಿ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ

Social Plugin