ವರದಿ : ಮಲ್ಲಿಕಾರ್ಜುನ ಘೋಸರವಾಡ.
ಬೆಳಗಾವಿ ಜಿಲ್ಲೆಯ ಗೋಕಾಕ : ನೇಪಾಳದಲ್ಲಿ ನಡೆದ ಆಗಸ್ಟ್ 10 ರಿಂದ 15 ರವರೆಗೆ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡ ಕ್ರೀಡಾ ಪಟುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಗೋಕಾಕಿನ ಹಿಲ್ ಗಾರ್ಡನ್ ಕಛೇರಿಯಲಿ ಸನ್ಮಾನಿಸಿ ಗೌರವಿಸಿದರು. ಈ ಕ್ರೀಡಾ ಪಟುಗಳಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ,ಪ್ರಿಯಾಂಕ ಜಾರಕಿಹೊಳಿ ಆರ್ಥಿಕ ನೆರವು ನೀಡುವ ಮೂಲಕ ಪ್ರೋತ್ಸಾಹಿಸಿದ್ದರು.
Social Plugin