ಮತ್ತೆ ಬಂಡಾಯ ಬಾವುಟ ಹಾರುತ್ತಾ?
ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ.
ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಾಲಾಗಿವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಭಾಗದವರಿಗೆ ಅವಕಾಶ ದೊರೆತಿಲ್ಲ. ಅದರಲ್ಲೂ ವೀರಶೈವ ಲಿಂಗಾಯತ ಸಮಾಜದವರಿಗೆ ಪ್ರಾಧಾನ್ಯತೆ ದೊರೆತಿದೆ. ಇದು ಇಲ್ಲಿನ ಸಚಿವಾಕಾಂಕ್ಷಿಗಳಾಗಿದ್ದ ಇತರ ಶಾಸಕರು ಮತ್ತು ಅವರ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ
ಐವರಿಗೆ ಸ್ಥಾನ ಸಿಕ್ಕಿತ್ತು:
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ 5 ಸ್ಥಾನಗಳು ಬೆಳಗಾವಿಗೆ ಸಿಕ್ಕಿದ್ದವು. ರಮೇಶ್ ಜಾರಕಿಹೊಳಿ ಲಕ್ಷ್ಮಣ ಸವದಿ, ಉಮೇಶ ಕತ್ತಿ, ಶ್ರೀಮಂತ ಪಾಟೀಲ ಮತ್ತು ಶಶಿಕಲಾ ಜೊಲ್ಲೆ ಸಚಿವರಾಗಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದವರಿಗೆ ಸಚಿವ ಸ್ಥಾನ ನೀಡಿಲ್ಲ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬರುವ ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದವರನ್ನು ಮರೆತು ಬಿಟ್ರಾ ಹೈಕಮಾಂಡ ಎಂದು ಬೆಳಗಾವಿ ಮಂದಿ ಮಾತಾಗಿದೆ.
ಮೊಟ್ಟೆ ಖರೀದಿ ಹಗರಣ ಆರೋಪದವರಿಗೆ ಮಣೆ:
ಜೊಲ್ಲೆ ದಂಪತಿ ಮೂಲ ಬಿಜೆಪಿಗರು ಪಕ್ಷದ ಹೈಕಮಾಂಡ್ ಜೊತೆಗೂ ಉತ್ತಮ ಸಂಬಂಧ ಹೊಂದಿದ್ದಾರೆ. ಹಲವು ದಿನಗಳಿಂದ ದೆಹಲಿಯಲ್ಲೇ ಇದ್ದುಕೊಂಡು ಲಾಬಿ ನಡೆಸಿದ್ದರು. ಹೀಗಾಗಿ, ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತ.

Social Plugin