ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವುದು ಹೆಮ್ಮೆಯ ವಿಷಯವಾಗಿದೆ. ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವುದರಿಂದ ನಮ್ಮ ಜ್ಞಾನವೂ ಕೂಡಾ ಹೆಚ್ಚಾಗುತ್ತದೆಎಂದು ಸ್ಥಳೀಯ ಎಸ್ಟಿಸಿ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಆರ್.ಜುನ್ನಾಯ್ಕರ್ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಎಸ್‌ಟಿಸಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಆಯ್ಕೆಯಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಕೂಡಾ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಸಂಶೋಧನೆಗಳನ್ನು ಕೈಗೊಳ್ಳುವುದರಿಂದ ವೈವಿಧ್ಯಮಯವಾದ ಜ್ಞಾನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಡಾ.ಜುನ್ನಾಯ್ಕರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ಪ್ರೊ.ಗೀತಾ ಸಜ್ಜನ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಕಾಲೇಜಿನ ಉಪನ್ಯಾಸಕರಿಗೆ ಈ ರೀತಿಯಅವಕಾಶ ಬಂದಿರುವುದು ಅಪರೂಪದ ಸಂಗತಿ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಈ ಭಾಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.ಪ್ರತಿಯೊಂದು ಸಾಧನೆ ಸತತ ಪ್ರಯತ್ನದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
- ವರದಿ
ಮಲ್ಲಿಕಾರ್ಜುನ ತುಂಗಳ
-ಮುಖ್ಯ ವರದಿಗಾರರು ಬಾಗಲಕೋಟೆ

Social Plugin