ಗೋಕಾಕ: ಗೋಕಾಕ್ ನಗರ ಬಿಜೆಪಿ ಮತ್ತು ಗ್ರಾಮೀಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಅಜಾದಿ ಕಾ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಭಾಗವಹಿಸಿ ಭಾರತಾಂಬೆ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಅದೇ ಸಂದರ್ಭದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಮಾಜಿ ಯೋಧರಿಗೆ ಸನ್ಮಾನಿಸಲಾಯಿತು.
 ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ, ತವನರಾಜ್ ಬೆನ್ನಾಡಿ, ಮಾಜಿ ಜಿ. ಪಂ. ಸದಸ್ಯರಾದ ಟಿ. ಆರ್. ಕಾಗಲ, ಮಡ್ಡಪ್ಪ ತೋಳಿನವರ, ಸುರೇಶ್ ಸನದಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಭಾರತಿ ಅಂಗಡಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಮಲ್ಲಿಕಾರ್ಜುನ ಘೋಸರವಾಡ.