ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.
ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ. 0.66 ಇದೆ. ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಕ್ರಮವಹಿಸಲಾಗುವುದು. ಶೇ. 1ಕ್ಕಿಂತ ಹೆಚ್ಚಿದ್ದರೆ ಶೇ. 50 ಸೀಟು ಭರ್ತಿ ಹಾಗೂ ಶೇ. 2ಕ್ಕಿಂತ ಹೆಚ್ಚಿದ್ದರೆ ಅಂತಹ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು. ಪಬ್‌ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Social Plugin